ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಟನಾಗಬೇಕೆಂಬ ಕನಸನ್ನು ನನಸು ಮಾಡಿಕೊಂಡ ಪಶು ವೈದ್ಯ ಮಧುನಂದನ್‌

PPeepal Media

Peepal Media • ಸಿನಿಮಾ

• 1 ನಿಮಿಷದ ಓದು

ನಟನಾಗಬೇಕೆಂಬ ಕನಸನ್ನು ನನಸು ಮಾಡಿಕೊಂಡ ಪಶು ವೈದ್ಯ ಮಧುನಂದನ್‌

ಬೆಂಗಳೂರು: ಕಲೆ ಕೈ ಬೀಸಿ ಕರೆದ ಮೇಲೆ, ಅದರೆಡೆ ಒಂದು ಸಣ್ಣ ಸೆಳೆತ ಬಂದ ಮೇಲೆ ನಾವೇನೇ ಮಾಡುತ್ತಿದ್ರು ಅದು ನಮ್ಮನ್ನು ಬಿಡುವುದಿಲ್ಲ. ಒಮ್ಮೆಯಾದ್ರು ಬಣ್ಣದ ಲೋಕದಲ್ಲಿ ಒಂದು ಸಣ್ಣ ಪ್ರಯತ್ನ ಮಾಡಿಬಿಡಬೇಕು ಎಂಬ ಹಂಬಲ ಮನದಾಳದಲ್ಲಿ ಇದ್ದೇ ಇರುತ್ತೆ. ಆದ್ರೆ ಪರಿಸ್ಥಿತಿ ಕೆಲವೊಮ್ಮೆ ಕಟ್ಟಿ ಹಾಕಿಬಿಡುತ್ತೆ. ಹೀಗೆ ಕಲಾವಿದನಾಗೋ ಕನಸು ಕಂಡು ಪಶುವೈದ್ಯನಾಗಿ ಕೆಲಸ ನಿರ್ವಹಿಸುತ್ತಿದ್ದವರು ಕೊನೆಗೂ ತಮ್ಮ ಕನಸಿನ ಬೆನ್ನಟ್ಟಿ ನನಸಾಗಿಸಿಕೊಂಡಿದ್ದಾರೆ. ಆತ ಬೇರಾರು ಅಲ್ಲ ಸ್ಯಾಂಡಲ್ ವುಡ್ ಅಂಗಳದಲ್ಲಿ ಬಿಡುಗಡೆಗೆ ಸಜ್ಜಾಗಿರುವ ಸಿನಿಮಾ ‘ಸದ್ದು ವಿಚಾರಣೆ ನಡೆಯುತ್ತಿದೆ’ಮುಖ್ಯ ಪಾತ್ರಧಾರಿ ಮಧುನಂದನ್.

ಹೌದು, ಇದು ಮಂಡ್ಯದ ಸಾಮಾನ್ಯ ಹುಡುಗನೊಬ್ಬನ ಕಥೆ, 20 ವರ್ಷಗಳ ಹಿಂದೆ ಸಿನಿಮಾ ರಂಗಕ್ಕೆ ಬರಬೇಕು ಎಂದು ಕನಸು ಕಂಡವರು ಆಯ್ಕೆ ಮಾಡಿಕೊಂಡಿದ್ದು ಪಶು ವೈದ್ಯ ವೃತ್ತಿ. ಶಾಲೆ, ಕಾಲೇಜು ದಿನಗಳಲ್ಲಿ ನಾಟಕ, ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದ ಮಧುನಂದನ್ ಸಿನಿಮಾದಲ್ಲಿ ನಟಿಸಬೇಕು ಎಂದು ಕನಸು ಕಂಡವರು. ಆದ್ರೆ ಮನೆಯಲ್ಲಿ ಇದಕ್ಕೆ ಸಮ್ಮತಿ ಇರಲಿಲ್ಲ. ಮಗ ಓದಬೇಕು, ಒಂದೊಳ್ಳೆ ಕೆಲಸ ಹುಡುಕಿಕೊಂಡು ಜೀವನ ನಡೆಸಬೇಕು ಅನ್ನೋದು ತಂದೆ ತಾಯಿ ಆಸೆ. ಮನೆಯವರ ಆಸೆಯಂತೆ ನಟನೆಯ ಒಲವನ್ನು ಬದಿಗೊತ್ತಿ ಪಶು ವೈದ್ಯಕೀಯದಲ್ಲಿ ವಿದ್ಯಾಭ್ಯಾಸ ಮುಗಿಸಿ, ಪಿಹೆಚ್ ಡಿ ಪದವಿಯನ್ನೂ ಪಡೆದು ಪಶು ವೈದ್ಯನಾಗಿ ಕೆಲಸ ನಿರ್ವಹಿಸಿ, ಪ್ರಸ್ತುತ ಸಹಾಯಕ ಪ್ರಾಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಮಧುನಂದನ್.

ಇದೆಲ್ಲದರ ನಡುವೆ ಕಲಾವಿದನಾಗಬೇಕೆಂಬ ಬಯಕೆ ಮಾತ್ರ ಹಾಗೆಯೇ ಇತ್ತು. ಕೋವಿಡ್ ಸಮಯದಲ್ಲಿ ರಂಗಭೂಮಿ ಸ್ನೇಹಿತರಾದ ಭಾಸ್ಕರ್ ಆರ್ ನೀನಾಸಂ ಸಿನಿಮಾ ಕುರಿತಾಗಿ ಸಂಪರ್ಕ ಮಾಡಿದ್ರು. ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ಬಗ್ಗೆ ಹೇಳಿದ್ರು. ನನ್ನಿಂದ ಸಾಧ್ಯನಾ ಎಂಬ ಪ್ರಶ್ನೆ ಬಂದಾಗ ಭಾಸ್ಕರ್ ಹುರಿದುಂಬಿಸಿದ್ರು. ಸಿನಿಮಾ ಮಾಡಲು ಒಪ್ಪಿಕೊಂಡೆ. ವೃತ್ತಿ ಜೊತೆಗೆ ನಟನೆ ಮಾಡಲು ವೈದ್ಯಕೀಯ ವಿದ್ಯಾನಿಲಯದಲ್ಲಿ ಅನುಮತಿಯೂ ಸಿಕ್ಕಿದೆ. ಕೊನೆಗೂ ಕಲಾವಿದನಾಗಿ ಬಣ್ಣ ಹಚ್ಚಿದ್ದೇನೆ. ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸಿದ್ದೇನೆ. ಖಡಕ್ ಪೊಲೀಸ್ ಪಾತ್ರಕ್ಕೆ ಬಣ್ಣ ಹಚ್ಚಿದ್ದೇನೆ. ಫಸ್ಟ್ ಟೈಂ ಈ ರೀತಿಯ ಪಾತ್ರ ಸಿಕ್ಕಿದ್ದು ಖುಷಿ ಕೊಟ್ಟಿದೆ. ನವೆಂಬರ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಇನ್ಮುಂದೆ ವೃತ್ತಿ ಜೊತೆಗೆ ಸಿನಿಮಾ ಪ್ಯಾಶನ್ ಕೂಡ ಮುಂದುವರೆಸಿಕೊಂಡು ಹೋಗುವ ಯೋಜನೆ ಹಾಕಿಕೊಂಡಿದ್ದೇನೆ ಎಂದು ಮಧುನಂದನ್ ತಿಳಿಸಿದ್ದಾರೆ.

ಸದ್ದು ವಿಚಾರಣೆ ನಡೆಯುತ್ತಿದೆ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಒಂದಿಷ್ಟು ನೈಜ ಘಟನೆಗಳ ಸ್ಪೂರ್ತಿಯೂ ಈ ಚಿತ್ರಕ್ಕಿದೆ. ಭಾಸ್ಕರ್  ಆರ್ ನೀನಾಸಂ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಅಚ್ಯುತ್ ಕುಮಾರ್,ರಾಕೇಶ್ ಮಯ್ಯ, ಪಾವನಾ ಗೌಡ, ರಾಘು ಶಿವಮೊಗ್ಗ ಮತ್ತು ಜಹಾಂಗೀರ್  ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಸುರಭಿ ಲಕ್ಷ್ಮಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಾಜ್ ಕಾಂತ ಕ್ಯಾಮೆರಾ ನಿರ್ದೇಶನ, ಸಚಿನ್ ಬಸ್ರೂರು ಸಂಗೀತ, ಶಶಿಧರ್ ಪಿ ಸಂಕಲನ ಚಿತ್ರಕ್ಕಿದೆ.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು