ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಾನ್ ಕಲಾವಿದ ದಿಲೀಪ್ ರಾಜ್ ಚಿತ್ರಕ್ಕೆ ರವಿಚಂದ್ರನ್ ಅಭಯ

PPeepal Media

Peepal Media ಸಿನಿಮಾ

• 1 ನಿಮಿಷದ ಓದು

ಮಹಾನ್ ಕಲಾವಿದ ದಿಲೀಪ್ ರಾಜ್ ಚಿತ್ರಕ್ಕೆ ರವಿಚಂದ್ರನ್ ಅಭಯ

ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ದಿಲೀಪ್ ರಾಜ್ ಈಗ ಕಿರುತೆರೆಯಲ್ಲೂ ಜನಪ್ರಿಯ. “ಹಿಟ್ಲರ್ ಕಲ್ಯಾಣ”ದ A J ಪಾತ್ರದ ಮೂಲಕ ಮೆಚ್ಚುಗೆ ಪಡೆಯುತ್ತಿದ್ದಾರೆ. ಪ್ರಸ್ತುತ ಇವರು  “ಮಹಾನ್ ಕಲಾವಿದ” ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಹಿರಿಯ ಪತ್ರಕರ್ತರಾದ ದಿ.ಸುರೇಶ್ಚಂದ್ರ ಅವರ ಪುತ್ರ ಅಭಯ್ ಚಂದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌ ಇದು ಇವರ ಎರಡನೇ ನಿರ್ದೇಶನದ ಚಿತ್ರ. ಸಂಗೀತ ನಿರ್ದೇಶನ ಕೂಡ ಅಭಯ್ ಚಂದ್ರ ಅವರದೆ.

ನಾನು ಪತ್ರಕರ್ತ ಸುರೇಶ್ಚಂದ್ರ ಅವರ ಪುತ್ರ. ಇದು ನನ್ನ ಎರಡನೇ ಚಿತ್ರ.  ಈ ಕಥೆಯನ್ನು ಸಿದ್ದಪಡಿಸಿಕೊಂಡು “ಕಲಾವಿದ” ಅಂತ ಶೀರ್ಷಿಕೆಯಿಟ್ಟಿದೆ. ಈ ವಿಷಯವನ್ನು ರವಿಚಂದ್ರನ್ ಸರ್ ಗೆ ತಿಳಿಸಿದೆ. ಧಾರಾಳವಾಗಿ ಈ ಶೀರ್ಷಿಕೆ ಇಡು. ಆದರೆ ಬರೀ “ಕಲಾವಿದ” ಅಂತ ಬೇಡ. ಏನಾದರೂ ಸೇರಿಸು ಅಂದರು. ನಾನು “ಮಹಾನ್ ಕಲಾವಿದ” ಅಂತ ಇಟ್ಟೆ. ಕಲಾವಿದನೊಬ್ಬನ ಬದುಕು ಬವಣೆಗಳನ್ನು ತೋರಿಸುವ ಕಥಾಹಂದರ ಹೊಂದಿರುವ ಚಿತ್ರವಿದು. ನಾನು ಈ ಪಾತ್ರ ಬರೆಯಬೇಕಾದರೆ ದಿಲೀಪ್ ರಾಜ್ ಈ ಪಾತ್ರಕ್ಕೆ ಸೂಕ್ತ ಎಂದು ಕೊಂಡಿದ್ದೆ.‌ ಅವರೆ ಈ ಚಿತ್ರದ ನಾಯಕರಾದರು. ಜಾಹ್ನವಿ ರಾಯಲ   ಹಾಗೂ ಪಲ್ಲವಿ ರಾಜು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಆನ್ ಲೈನ್ ನಲ್ಲಿ ಸಿಕ್ಕ ಗೆಳೆಯ ಭರತ್ ಬಿ ಗೌಡ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕಿರಣ್ ಗಜ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಗಿದಿದೆ‌. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ದೇಶಕ ಅಭಯ್ ಚಂದ್ರ ತಿಳಿಸಿದ್ದಾರೆ.

ಬಹಳ ದಿನಗಳ ನಂತರ ಮತ್ತೆ ಚಿತ್ರವೊಂದರಲ್ಲಿ ನಟಿಸುತ್ತಿದ್ದೇನೆ. ಅಭಯ್ ಚಂದ್ರ ಉತ್ತಮ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಗಿದಿದೆ. ಕಲಾವಿದ ಮಾಡುವ ನಟನೆ‌ ಮೊದಲು ನಿರ್ದೇಶಕರಿಗೆ ಮೆಚ್ಚುಗೆಯಾಗಬೇಕು. ನನ್ನ ನಟನೆ ಬಗ್ಗೆ ಮೊದಲು ಅಭಯ್ ಹೇಳಬೇಕು. ನಾನು ಸಹ ಈ ಚಿತ್ರವನ್ನು ನೋಡಲು ಕಾತುರದಿಂದ ಕಾಯುತ್ತಿರುವುದಾಗಿ ನಾಯಕ ನಟ ದಿಲೀಪ್ ರಾಜ್ ಹೇಳಿದ್ದಾರೆ. ಈ ಚಿತ್ರದಲ್ಲಿ ದಿಲೀಪ್ ರಾಜ್ ಅವರ ಪತ್ನಿ ಪಾತ್ರ ಮಾಡುತ್ತಿರೋದು ಜಾಹ್ನವಿ ರಾಯಲ.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು