ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಂಸೋರೆ ನಿರ್ದೇಶನದ ‘19.20.21’ ಬಿಡುಗಡೆಗೆ ಸಜ್ಜು : ಶೀಘ್ರದಲ್ಲೇ ರಿಲೀಸ್ ಡೇಟ್ ಅನೌನ್ಸ್

P

Peepal Media Desk • ಸಿನಿಮಾ

• 1 ನಿಮಿಷದ ಓದು

ಮಂಸೋರೆ ನಿರ್ದೇಶನದ ‘19.20.21’ ಬಿಡುಗಡೆಗೆ ಸಜ್ಜು : ಶೀಘ್ರದಲ್ಲೇ ರಿಲೀಸ್ ಡೇಟ್ ಅನೌನ್ಸ್

ಬೆಂಗಳೂರು : ‘ಹರಿವು’, ‘ನಾತಿಚರಾಮಿ’, ‘ಆಕ್ಟ್ 1978’ ಹೀಗೆ ತಮ್ಮ ವಿಭಿನ್ನ ಸಬ್ಜೆಕ್ಟ್ ಸಿನಿಮಾಗಳ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತ ಬಂದಿರುವ ರಾಷ್ಟ್ರಪಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ರವರ ಬಹು ನಿರೀಕ್ಷಿತ ಸಿನಿಮಾ ‘19.20.21’ ಇದರ ಶೀರ್ಷಿಕೆ ಮೂಲಕವೇ ಸಾಕಷ್ಟು ಕ್ಯೂರಿಯಾಸಿಟಿಯನ್ನು ಮೂಡಿಸಿದ್ದಯ ಸಿನಿಮಾ ಬಿಡುಗಡೆಯ ದಿನಾಂಕ ಬಾಗಿಲಿಗೆ ಬಂದು ನಿಂತಿದೆ.

ಹೊಸ ಪೋಸ್ಟರ್ ಗಳ ಮೂಲಕ ಗಮನ ಸೆಳೆದಿರುವ ‘19.20.21’ ಪ್ರೇಕ್ಷಕರಲ್ಲಿ ಕುತೂಹಲವನ್ನು ಹುಟ್ಟು ಹಾಕಿದೆ. ಮಂಸೋರೆ ಅವರ ಹಿಂದಿನ ಸಿನಿಮಾಗಳಂತೆ ಈ ಚಿತ್ರ ಕೂಡ ಭಿನ್ನವಾಗಿರುತ್ತೆ ಅನ್ನೋದಕ್ಕೆ ಚಿತ್ರದ ಪೋಸ್ಟರ್ ಗಳು ಸಾಕ್ಷಿಯಾಗಿವೆ. ಪ್ರತಿ ಪೋಸ್ಟರ್ ಗಳು ಈ ಚಿತ್ರದ ಮೂಲಕ ನಿರ್ದೇಶಕರು ಸಮಾಜಕ್ಕೆ ಹೊಸದೊಂದು ಗಟ್ಟಿತನದ ಸಂದೇಶವನ್ನು ಹೇಳ ಹೊರಟಿದ್ದಾರೆ ಎನ್ನುವ ಸುಳಿವನ್ನು ನೀಡಿದೆ. ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಹೆಣೆದ ಕಥೆ ಚಿತ್ರದಲ್ಲಿದ್ದು, ಸೋಶಿಯಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಚಿತ್ರೀಕರಣ ಮುಗಿಸಿ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಸಿನಿಮಾ ಬಿಡುಗಡೆಗೂ ತಯಾರಿ ನಡೆಸುತ್ತಿದ್ದು ಶೀಘ್ರದಲ್ಲೇ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ.

ರಂಗಭೂಮಿ ಕಲಾವಿದರರಾದ ಶೃಂಗ ಬಿ ವಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ಮಹದೇವ್ ಹಡಪತ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ. ಯಲ್ಲಾಪುರ, ಧಾರವಾಡ, ಮಂಗಳೂರು, ಕುಂದಾಪುರ ಸೇರಿದಂತೆ ಹಲವು ಕಡೆ ಚಿತ್ರವನ್ನು ಸೆರೆ ಹಿಡಿಯಲಾಗಿದೆ.

ಶಿವು ಬಿ ಕೆ ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಬಿಂದು ಮಾಲಿನಿ ಸಂಗೀತ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ  ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕತೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ 19.20.21 ಚಿತ್ರವನ್ನು ನಿರ್ಮಾಣ ಮಾಡಿದ್ದು ಶ್ರೀಘ್ರದಲ್ಲೇ ಪ್ರೇಕ್ಷರನ್ನು ರಂಜಿಸಲು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ : ➤➤ʼಅಟ್ಲಿʼ ಚಿತ್ರದಲ್ಲಿ ವಿಶೇಷ ಪಾತ್ರ : ಫ್ಯಾಮಿಲಿ ಸ್ಟಾರ್ ಅಭಿಜಿತ್

P

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version