ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮತ್ತೆ ಬಂದಿದೆ ‘ಧಮ್’ ಶ್ರೀಜಿತ್ ಜೊತೆಗೆ ಬೆಂಗಾಲಿ ಬೆಡಗಿ

P

Peepal Media • ಸಿನಿಮಾ

• 1 ನಿಮಿಷದ ಓದು

ಮತ್ತೆ ಬಂದಿದೆ ‘ಧಮ್’ ಶ್ರೀಜಿತ್ ಜೊತೆಗೆ ಬೆಂಗಾಲಿ ಬೆಡಗಿ

ಕಿಚ್ಚ ಸುದೀಪ್ ಅವರ ಕೆರಿಯರ್ ನ ಆರಂಭದಲ್ಲಿ, ಅವರ ನಾಯಕತ್ವದಲ್ಲಿ ಎಂ. ಎಸ್. ರಮೇಶ್ ನಿರ್ದೇಶನದ “ಧಮ್” ಎನ್ನುವ ಚಿತ್ರ ಬಂದಿತ್ತು. ಈಗ ಮತ್ತೆ ಅದೇ ಹೆಸರಿನ ಮತ್ತೊಂದು ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಕನ್ನಡದ ಹುಡುಗ ಶ್ರೀಜಿತ್ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ವಿ ಆರ್ ಆರ್ ನಿರ್ದೇಶಿಸಿದ್ದಾರೆ.

 ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ನೆರವೇರಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಕಾರ್ಯದರ್ಶಿ ಕುಶಾಲ್ ಚಂದ್ರಶೇಖರ್ ಹಾಗೂ ನಟ, ನಿರ್ದೇಶಕ ರವಿಕಿರಣ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ನಾನು ಬಾಲನಟನಾಗಿ “ಹಾಥಿ ಮೇರೆ ಸಾಥಿ” ಸೇರಿದಂತೆ ಸುಮಾರು ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಹದಿನಾರು ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ನನ್ನ ತಾಯಿ ಮೈಸೂರಿನವರು‌. ಅವರಿಗೆ ನಾನು ಕನ್ನಡ ಚಿತ್ರವೊಂದನ್ನು ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಗ ಈಡೇರಿದೆ. ಈ ಚಿತ್ರ ಕನ್ನಡ ಹಾಗೂ ತಮಿಳಿನಲ್ಲಿ ನಿರ್ಮಾಣವಾಗಿದೆ. ಈ ಚಿತ್ರದ ನಾಯಕರಾಗಿ ಸಂಚಾರಿ ವಿಜಯ್ ಮಾಡಬೇಕಿತ್ತು. ಕಾರಣಾಂತರದಿಂದ ಅದು ಆಗಲಿಲ್ಲ. ನಂತರ ಶ್ರೀಜಿತ್ ಆಯ್ಕೆಯಾದರು ಎಂದಿದ್ದಾರೆ ರ್ದೇಶಕ ವಿ ಆರ್ ಆರ್.  

ಇನ್ನು ಬೆಂಗಾಲಿ ಹುಡುಗಿ ಎರೀನ್ ಅಧಿಕಾರಿ ಈ ಚಿತ್ರದ ನಾಯಕಿ. ಶಯ್ಯಾಜಿ ಶಿಂಧೆ, ರವಿಕಾಳೆ, ನಾಗೇಶ್ವರ ರಾವ್, ಗುರುಚಂದ್ರನ್  ಮುಂತಾದವರು ತಾರಾಬಳಗದಲ್ಲಿದ್ದಾರೆ. ರಿಹಾನ್ ಅಹಮದ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇಳಯರಾಜ ಅವರ ಬಳಿ ಕಾರ್ಯ ನಿರ್ವಹಿಸಿರುವ ಜೀವ ವರ್ಷಿಣಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸದ್ಯದಲ್ಲೇ ಚಿತ್ರ ಬಿಡುಗಡೆ ಆಗಲಿದೆ.

ನನ್ನ ಸ್ನೇಹಿತನ ಮೂಲಕ ನಿರ್ದೇಶಕರ ಪರಿಚಯವಾಯಿತು.  ವಿ.ಆರ್.ಆರ್ ಅವರಂತಹ ನಿರ್ದೇಶಕರ ಚಿತ್ರದಲ್ಲಿ ಅಭಿನಯಿಸಿದ್ದು ಸಂತೋಷವಾಗಿದೆ.  ನಾನು ಈ ಹಿಂದೆ “ರಂಗ್ ಬಿ ರಂಗಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದೆ. ಇದು ಎರಡನೇ ಚಿತ್ರ. ಆಕ್ಷನ್, ಥ್ರಿಲ್ಲರ್, ಸೆಂಟಿಮೆಂಟ್ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ ಎನ್ನುತ್ತಾರೆ ನಾಯಕ ಶ್ರೀಜಿತ್.

P

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version