ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನವೆಂಬರ್ 18ಕ್ಕೆ ‘ಹೊಂದಿಸಿ ಬರೆಯಿರಿ‘

PPeepal Media

Peepal Media • ಸಿನಿಮಾ

• 1 ನಿಮಿಷದ ಓದು

ನವೆಂಬರ್ 18ಕ್ಕೆ ‘ಹೊಂದಿಸಿ ಬರೆಯಿರಿ‘

ಜಗನ್ನಾಥನ ಫಿಲಾಸಫಿ

ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ನಿರೀಕ್ಷೆ ಮೂಡಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ನವೆಂಬರ್ 18ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಬಹು ದೊಡ್ಡ ಹಾಗೂ ಕಲರ್ ಫುಲ್ ತಾರಾಗಣ ಚಿತ್ರದಲ್ಲಿದ್ದು, ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀ ಮಹದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಎಳೆಯನ್ನು ಮೂಲವಾಗಿಟ್ಟುಕೊಂಡು ಅದರ ಸುತ್ತ ಹೆಣೆಯಲಾದ ಕಥಾಹಂದರವೇ ‘ಹೊಂದಿಸಿ ಬರೆಯಿರಿ’ ಸಿನಿಮಾ.  ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಕಥೆಯಿದೆ. ಭಾವನಾತ್ಮಕ ಜರ್ನಿಯೂ ಇದೆ.  ಈಗಾಗಲೇ ಚಿತ್ರದ ಸ್ಯಾಂಪಲ್ ಗಳ ಮೂಲಕ ಗಮನ ಸೆಳೆದಿರುವ ಈ ಚಿತ್ರ ಸಿನಿರಸಿಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಚಿತ್ರದ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು ನವೆಂಬರ್ 18ಕ್ಕೆ ರಾಜ್ಯಾದ್ಯಂತ ಚಿತ್ರ ಬಿಡುಗಡೆ ಮಾಡಲು ಡೇಟ್ ಕನ್ಫರ್ಮ್ ಮಾಡಿದೆ ಚಿತ್ರತಂಡ.

ಚಿತ್ರದಲ್ಲಿ ಎಂಟು ಹಾಡುಗಳಿದ್ದು ಈಗಾಗಲೇ ಒಂದು ಸಾಂಗ್ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಕ್ಟೋಬರ್ ನಲ್ಲಿ ಟ್ರೇಲರ್ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ನಿರ್ದೇಶಕ ಜಗನ್ನಾಥ್ ಗಿದು ಮೊದಲ ಸಿನಿಮಾ. ರಾಕ್ ಲೈನ್ ಪ್ರೊಡಕ್ಷನ್ ನಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನು ತಾವೇ ಮಾಡಿದ್ದಾರೆ.

ಶಾಂತಿ ಸಾಗರ್ ಹೆಚ್.ಜಿ ಕ್ಯಾಮೆರಾ ನಿರ್ದೇಶನ, ಜೋ ಕೋಸ್ಟ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಟಗರು ಖ್ಯಾತಿಯ ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ಜಗನ್ನಾಥ್ ಮೂವರ ಸಂಭಾಷಣೆ ಚಿತ್ರಕ್ಕಿದೆ. ಸಂಡೇ ಸಿನಿಮಾಸ್ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸೇರಿ ಹೊಂದಿಸಿ ಬರೆಯಿರಿ ಚಿತ್ರ  ನಿರ್ಮಾಣ ಮಾಡಿದ್ದಾರೆ. ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್, ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು