ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್ ನಲ್ಲಿ  ಕನ್ನಡತಿ ಇತಿ ಆಚಾರ್ಯ ಸ್ಪೆಷಲ್

PPeepal Media

Peepal Media • ಸಿನಿಮಾ

• 1 ನಿಮಿಷದ ಓದು

ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್ ನಲ್ಲಿ  ಕನ್ನಡತಿ ಇತಿ ಆಚಾರ್ಯ ಸ್ಪೆಷಲ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅಭಿನಯದ ‘ಕವಚ’ ಸಿನಿಮಾದಲ್ಲಿ ನಟಿಸಿದ್ದ ಇತಿ ಆಚಾರ್ಯ ಇಲ್ಲಿವರೆಗೂ ಯಾರೂ ಮಾಡಿರದ ಸಾಧನೆಯೊಂದನ್ನು ತಮ್ಮ ಪಾಲಾಗಿಸಿಕೊಂಡಿದ್ದಾರೆ. ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋರ್ಡಿಂಗ್ ನಲ್ಲಿ ಕಾಣಿಸಿಕೊಂಡ ಮೊದಲ ಸ್ಯಾಂಡಲ್ ವುಡ್ ನಟಿ ಎಂಬ ಹಿರಿಮೆಗೆ ಇತಿ ಪಾತ್ರವಾಗಿದ್ದಾರೆ.

ಇತ್ತೀಚೆಗೆ ನ್ಯೂಯಾರ್ಕ್ ನಲ್ಲಿ ನಡೆದ ನ್ಯೂಯಾರ್ಕ್ ಫ್ಯಾಶನ್ ವೀಕ್ ನಲ್ಲಿ ಭಾರತ ಮೂಲದ ಫ್ಯಾಶನ್ ಡಿಸೈನರ್ ಡಿಸೈನ್ ಮಾಡಿದ ಡ್ರೆಸ್ ಅನ್ನು ಇತಿ ಶೋ ಕೇಸ್ ಮಾಡಿದ್ದಾರೆ. ಇದನ್ನು ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ತನ್ನ ಹೋರ್ಡಿಂಗ್ ನಲ್ಲಿ ಹಾಕುವ ಮೂಲಕ ಮೊದಲ ಬಾರಿಗೆ ಕನ್ನಡದ ನಟಿಯನ್ನು ಗುರುತಿಸಿದೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್  ಅಂತರಾಷ್ಟ್ರೀಯ ವೇದಿಕೆಯಾಗಿದ್ದು ಸಾಮಾನ್ಯವಾಗಿ ಬಾಲಿವುಡ್ ನಟಿಮಣಿಯರೇ ಇಲ್ಲಿ ಕಾಣಿಸಿಕೊಳ್ಳುತ್ತಿದ್ರು. ಕನ್ನಡದ ನಟಿಯೊಬ್ಬರು ಈ ಇಲ್ಲಿ ಮಿಂಚಿದ್ದು ಇದೇ ಮೊದಲು ಅನ್ನೋದೇ ವಿಶೇಷ. ಈ ಕಾರಣಕ್ಕೆ ಅಂತರಾಷ್ಟ್ರೀಯ ವೇದಿಕೆಯಲ್ಲಿ ಕನ್ನಡ ಚಿತ್ರರಂಗ ಹಾಗೂ ದೇಶವನ್ನು ಪ್ರತಿನಿಧಿಸಿದ್ದು ಹರುಷ ತಂದಿದೆ ಎನ್ನುತ್ತಾರೆ ಇತಿ ಆಚಾರ್ಯ.

ಈ ಬಾರಿಯ ಕ್ಯಾನಿಸ್ ಫಿಲ್ಮಂ ಫೆಸ್ಟ್ ರೆಡ್ ಕಾರ್ಪೆಟ್ ನಲ್ಲಿ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದಿದ್ರು ಈ ಕನ್ನಡತಿ. ಇದೀಗ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.  ಈ ಮೂಲಕ ಇತಿ ಒಂದೇ ವರ್ಷದಲ್ಲಿ ಎರಡೆರಡು ಅಂತರಾಷ್ಟ್ರೀಯ ವೇದಿಕೆ ಹಂಚಿಕೊಂಡ ಸಾಧನೆ ಮಾಡಿದ್ದಾರೆ.

ನಟಿ ಹಾಗೂ ಮಾಡೆಲ್ ಆಗಿರುವ ಇತಿ 2016ರ ಮಿಸ್ ಸೌತ್ ಇಂಡಿಯಾ ವಿನ್ನರ್ ಕೂಡ ಹೌದು. ಆರ್ ವಿ ಎಸ್ ಪಿ ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇದರ ಜೊತೆಗೆ ನಟನೆಯಲ್ಲೂ ಫುಲ್ ಬ್ಯುಸಿಯಾಗಿದ್ದಾರೆ. ಇತಿ ನಾಯಕಿಯಾಗಿ ನಟಿಸಿರುವ ಕನ್ನಡದ ಲಕ್ಷ್ಮೀಪುತ್ರ ಚಿತ್ರ ಬಿಡುಗಡೆಯಾಗಬೇಕಿದೆ. ಕೇವಲ ಕನ್ನಡವಷ್ಟೇ ಅಲ್ಲದೇ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ.

🔸 ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/GBc6sg7E2FQLuXblEdBxSi

ಇದನ್ನೂ ನೋಡಿ: https://www.facebook.com/watch?v=808934966912602

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು