ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯ

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯ

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಸಿನಿಮಾ ವಿವಾದದ ಕೇಂದ್ರಬಿಂದುವಾಗಿದೆ. ಹಾಸ್ಯನಟ ಕೋಮಲ್ ಕುಮಾರ್, ಮೇಘನಾ ರಾಜ್ ಹಾಗೂ ಅನುಷಾ ರೈ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ, ಸಂದೇಶ್ ಶೆಟ್ಟಿ ಅಜ್ರಿ ನಿರ್ದೇಶನದ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಚಿತ್ರದ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಚಿತ್ರದ ಕಥಾವಸ್ತು ಮತ್ತು ಕೆಲವು ದೃಶ್ಯಗಳಲ್ಲಿ ಧಾರ್ಮಿಕ ಸೂಕ್ಷ್ಮ ವಿಚಾರಗಳನ್ನು ಬಳಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಸಿನಿಮಾ ಕೋಮು ದ್ವೇಷ ಹರಡುವ ಪ್ರಯತ್ನವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ನವೆಂಬರ್ 3ರಂದು ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದ್ದು, ಟಿಪ್ಪು ಸುಲ್ತಾನ್ ಕುರಿತ ಚಿತ್ರಣ, ಲವ್ ಜಿಹಾದ್, ಧಾರ್ಮಿಕ ಮತಾಂತರ ಹಾಗೂ ದೇವಾಲಯಗಳ ಮೇಲಿನ ದಾಳಿಯಂತಹ ವಿಚಾರಗಳ ಪ್ರಸ್ತಾಪ ಚರ್ಚೆಗೆ ಗ್ರಾಸವಾಗಿದೆ. ವಿಶೇಷವಾಗಿ ಟಿಪ್ಪು ಸುಲ್ತಾನ್ ಪಾತ್ರವನ್ನು ಚಿತ್ರಿಸಿರುವ ರೀತಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಟೀಸರ್‌ನಲ್ಲಿರುವ ಕೆಲವು ಸಂಭಾಷಣೆಗಳು ಮತ್ತು ದೃಶ್ಯಗಳು ಒಂದು ನಿರ್ದಿಷ್ಟ ಧರ್ಮದ ವಿರುದ್ಧ ದ್ವೇಷ ಮೂಡಿಸುವ ರೀತಿಯಲ್ಲಿವೆ ಎಂಬುದು ಆಕ್ಷೇಪ ವ್ಯಕ್ತಪಡಿಸುತ್ತಿರುವವರ ವಾದವಾಗಿದೆ.

“ಕಾಶ್ಮೀರ್ ಫೈಲ್ಸ್’, ‘ಕೇರಳ ಸ್ಟೋರಿ’ ಮಾದರಿಯ ನಿರೂಪಣೆ
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸುತ್ತಿರುವ ಕೆಲವರು, ‘ಕಾಶ್ಮೀರ್ ಫೈಲ್ಸ್’ ಮತ್ತು ‘ಕೇರಳ ಸ್ಟೋರಿ’ ಚಿತ್ರಗಳಲ್ಲಿದ್ದ ವಿವಾದಾತ್ಮಕ ನಿರೂಪಣೆಯನ್ನೂ ಮೀರಿಸುವ ರೀತಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ವಾತಾವರಣ ಸೃಷ್ಟಿಸುವ ಪ್ರಯತ್ನ ಈ ಚಿತ್ರದ ಮೂಲಕ ನಡೆಯುತ್ತಿದೆಯೇ ಎಂಬ ಪ್ರಶ್ನೆ ಎತ್ತಿದ್ದಾರೆ.

ಟೀಸರ್‌ನಲ್ಲಿ ಧಾರ್ಮಿಕ ಧ್ವಜಗಳ ಬಳಕೆ, ಟಿಪ್ಪು ಸುಲ್ತಾನ್ ಕುರಿತ ಸಂಭಾಷಣೆಗಳು ಹಾಗೂ ಲವ್ ಜಿಹಾದ್‌ನಂತಹ ರಾಜಕೀಯವಾಗಿ ಸೂಕ್ಷ್ಮ ವಿಚಾರಗಳನ್ನು ಕಥೆಯ ಭಾಗವಾಗಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ‘ಇತಿಹಾಸ ತಾನಾಗಿ ಮರುಕಳಿಸುತ್ತಿದೆಯೇ ಅಥವಾ ಇತಿಹಾಸದಿಂದ ನಾವು ಅರಿಯುವುದನ್ನು ಸೋತಿದ್ದೇವೆಯೇ?’ ಎಂಬ ಸಂಭಾಷಣೆಯೂ ಚರ್ಚೆಗೆ ಒಳಗಾಗಿದೆ. ಇಂತಹ ಸಂಭಾಷಣೆಗಳು ಇತಿಹಾಸದ ವಿಮರ್ಶೆಯ ನೆಪದಲ್ಲಿ ಕೋಮು ಧ್ರುವೀಕರಣಕ್ಕೆ ಬಳಕೆಯಾಗುತ್ತಿವೆಯೇ ಎಂಬ ಆತಂಕವನ್ನು ಕೆಲವರು ವ್ಯಕ್ತಪಡಿಸಿದ್ದಾರೆ.

ಸೆನ್ಸಾರ್ ಮಂಡಳಿಯ ಗಮನಕ್ಕೆ ತರಲು ಆಗ್ರಹ
ಸಿನಿಮಾ ಕೇವಲ ಮನರಂಜನೆಯ ಮಾಧ್ಯಮವಾಗಿರದೆ ಸಮಾಜದ ಮೇಲೆ ಪ್ರಭಾವ ಬೀರುವ ಶಕ್ತಿಯನ್ನೂ ಹೊಂದಿದೆ. ಅದರಲ್ಲೂ ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದ ವಿಚಾರಗಳನ್ನು ನಿರೂಪಿಸುವಾಗ ನಿರ್ದೇಶಕರು ಮತ್ತು ನಿರ್ಮಾಪಕರು ಹೆಚ್ಚಿನ ಜವಾಬ್ದಾರಿ ವಹಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.

ಚಿತ್ರದ ಟೀಸರ್‌ನಲ್ಲಿರುವ ದೃಶ್ಯಗಳು ಹಾಗೂ ಸಂಭಾಷಣೆಗಳನ್ನು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಗಂಭೀರವಾಗಿ ಪರಿಶೀಲಿಸಬೇಕು. ಈಗಾಗಲೇ ಚಿತ್ರವನ್ನು ಪರಿಶೀಲಿಸಿದ್ದರೆ, ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಅಂಶಗಳಿವೆಯೇ ಎಂಬುದನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ವಿವಾದಾತ್ಮಕ ಅಂಶಗಳಿರುವ ಚಿತ್ರಕ್ಕೆ ಯಾವುದೇ ಪರಿಶೀಲನೆಯಿಲ್ಲದೆ ಬಿಡುಗಡೆಗೆ ಅವಕಾಶ ನೀಡಬಾರದು ಎಂಬ ಒತ್ತಾಯವೂ ಕೇಳಿಬಂದಿದೆ.

ಚಿತ್ರ ಬಿಡುಗಡೆಯಾದ ನಂತರ ಧಾರ್ಮಿಕ ಸಮುದಾಯಗಳ ನಡುವೆ ಅನಗತ್ಯ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಕೆಲವರು, ಸಿನಿಮಾ ಬಿಡುಗಡೆ ಮಾಡಬಾರದು ಎಂಬ ಅಭಿಪ್ರಾಯವನ್ನೂ ಮುಂದಿಟ್ಟಿದ್ದಾರೆ.

ಒಟ್ಟಿನಲ್ಲಿ, ಕನ್ನಡ ಚಿತ್ರರಂಗದಲ್ಲಿ ಇಂತಹ ಧಾರ್ಮಿಕ ಸೂಕ್ಷ್ಮತೆ ಹೊಂದಿರುವ ಕಥಾವಸ್ತುಗಳ ನಿರೂಪಣೆ ಯಾವ ಉದ್ದೇಶ ಹೊಂದಿದೆ ಎಂಬ ಚರ್ಚೆ ಆರಂಭವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕೋಮು ದ್ವೇಷಕ್ಕೆ ಅವಕಾಶ ನೀಡಬಾರದು ಎಂಬುದು ಆಕ್ಷೇಪ ವ್ಯಕ್ತಪಡಿಸುತ್ತಿರುವವರ ಪ್ರಮುಖ ವಾದವಾಗಿದೆ. ಈ ವಿವಾದದ ಕುರಿತು ಚಿತ್ರತಂಡದ ಸ್ಪಷ್ಟನೆ ಹಾಗೂ ಸೆನ್ಸಾರ್ ಮಂಡಳಿಯ ನಿಲುವು ಮಹತ್ವ ಪಡೆದುಕೊಂಡಿದೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು