ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ʼಪಾಲಾರ್ʼ ಚಿತ್ರ ಒಂದು ಮೈಲುಗಲ್ಲಾಗಲಿ: ಖ್ಯಾತ ತಮಿಳು ನಿರ್ದೇಶಕ ʼಪ.ರಂಜಿತ್‌ʼ

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

ʼಪಾಲಾರ್ʼ ಚಿತ್ರ ಒಂದು ಮೈಲುಗಲ್ಲಾಗಲಿ: ಖ್ಯಾತ ತಮಿಳು ನಿರ್ದೇಶಕ ʼಪ.ರಂಜಿತ್‌ʼ

ಬೆಂಗಳೂರು: ಯುವ ನಿರ್ದೇಶಕ ಜೀವಾ ನವೀನ್ ಅವರು ನಿರ್ದೇಶನಮಾಡಿರುವ ಕನ್ನಡ ಚಲನಚಿತ್ರದ ʼಪಾಲಾರ್ʼ ಟ್ರೈಲರ್ ಸೋಮವಾರ ಬಿಡುಗಡೆಯಾಗಿದ್ದು, ಖ್ಯಾತ ತಮಿಳು ಚಲನಚಿತ್ರ ನಿರ್ದೇಶಕ ʼಪ.ರಂಜಿತ್‌ʼ ಅವರು ಸಿನಿಮಾದ ಟ್ರೈಲರನ್ನು ತಮ್ಮ ಟ್ವಿಟರ್‌ ಖಾತೆಯ ಮೂಲಕ ಲೋಕಾರ್ಪಣೆಗೊಳಿಸಿ ಪಾಲಾರ್ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ಕರ್ನಾಟಕದಾದ್ಯಂತ ʼಪಾಲಾರ್‌ʼ ಟ್ರೈಲರ್‌ ಸದ್ದು ಮಾಡುತ್ತಿದ್ದು, ದಲಿತರ ಮೇಲಾಗುವ ದೌರ್ಜನ್ಯ, ಜಾತಿಯತೆಯ ತಾರತಮ್ಯ ಸವರ್ಣಿಯರ ದಬ್ಬಾಳಿಕೆ, ಮತ್ತು ದಲಿತ ಪ್ರತಿರೋಧದ ಕಥಾವಸ್ತುವನ್ನು ಒಳಗೊಂಡ ಸಿನಿಮಾ ಪಾಲಾರ್.‌

ಈ ಸಿನಿಮಾ ಕುರಿತು ಖ್ಯಾತ ತಮಿಳು ಚಲನಚಿತ್ರ ನಿರ್ದೇಶಕ ʼಪ.ರಂಜಿತ್‌ʼ ಟ್ವೀಟ್‌ ಮಾಡಿದ್ದು, ಜೀವಾ ನವೀನ್  ನಿರ್ದೇಶನದ  ಹಾಗೂ ಸೌನವಿ ಫಿಲ್ಮ್ಸ್ ಅರ್ಪಿಸುವ ಕನ್ನಡ ಚಲನಚಿತ್ರ ʼಪಾಲಾರ್ʼ ಟ್ರೈಲರ್ ಅನ್ನು ಅರ್ಪಿಸುತ್ತಿದ್ದೇನೆ. ಕಥೆಯು ನೈಜ ಘಟನೆಗಳ ಆಧಾರದ ಮೇಲೆ ನಿರ್ಮಾಣವಾಗಿದ್ದು, ʼಪಾಲಾರ್ʼ ಸಿನಿಮಾ ಕನ್ನಡ ಚಲನಚಿತ್ರರಂಗದಲ್ಲಿ ಮೈಲಿಗಲ್ಲಾಗಲಿ ಎಂದು ಶುಭಹಾರೈಸಿದ್ದಾರೆ.

ಸಿನಿಮಾದಲ್ಲಿ ‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಮುಖ್ಯ ಪಾತ್ರದಲ್ಲಿ, ನಾಯಕನಾಗಿ ರಾಷ್ಟ್ರೀಯ ನಾಟಕ ಶಾಲೆಯ ತಿಲಕ್ ರಾಜ್ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ನೂರಕ್ಕು ಹೆಚ್ಚು ಕಲಾವಿದರು ಅಭಿನಯಿಸಿದ್ದಾರೆ. ಹಾಗಯೇ ಚಿತ್ರಕ್ಕೆ ಆಲಿಫ್‌ ರೆಹಾನ್‌ರವರ ಛಾಯಗ್ರಾಹಣ, ವಲಿ ಕುಲಾಯಿಸ್‌ ಸಂಕಲನ, ರಾಜಮೌಳಿ ತಂಡದ ಸಾಹಿತಿ ವರದರಾಜ್‌ ಚಿಕ್ಕಬಳ್ಳಾಪುರ ಹಾಡುಗಳನ್ನು ರಚಿಸಿದ್ದು, ಸುಬ್ರಹ್ಮಣ್ಯ ಆಚಾರ್ಯ ಅವರ ಸಂಗೀತವಿದೆ. ಸುಪ್ರೀತ್‌ ಪಲ್ಗುಣ, ಸುಭ್ರಹ್ಮಣ್ಯ ಆಚಾರ್ಯ ಜೊತೆಗೆ ಉಮಾ ವೈ.ಜಿ. ಹಾಡುಗಳಿಗೆ ದನಿಯಾಗಿದ್ದಾರೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು