ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪೃಥ್ವಿ ಅಂಬಾರ್ ‘ದೂರದರ್ಶನ’, ಉಗ್ರಂ ಮಂಜು ಹೊಸ ಅವತಾರ

PPeepal Media

Peepal Media • ಸಿನಿಮಾ

• 1 ನಿಮಿಷದ ಓದು

ಪೃಥ್ವಿ ಅಂಬಾರ್ ‘ದೂರದರ್ಶನ’, ಉಗ್ರಂ ಮಂಜು ಹೊಸ ಅವತಾರ

ದೂರದರ್ಶನ ಸಿನಿಮಾ ಸದ್ಯ ಕುತೂಹಲದ ಕೇಂದ್ರಬಿಂದುವಾಗಿದೆ. ವಿಭಿನ್ನ ಪೋಸ್ಟರ್, ಟೀಸರ್ ಮತ್ತು ಇಲ್ಲಿವರೆಗೂ ಆಗಿರುವ ಪ್ರಚಾರದ ಮೂಲಕ ನಿರೀಕ್ಷೆಯನ್ನು ಹುಟ್ಟುಹಾಕಿರುವ ಈ ಚಿತ್ರದಲ್ಲಿ ಉಗ್ರಂ ಸಿನಿಮಾ ಖ್ಯಾತಿಯ ಮಂಜು ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇದುವರೆಗೂ ಮಾಡಿರುವ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಕಿಟ್ಟಿ ಎಂಬ ಪಾತ್ರಕ್ಕೆ ಉಗ್ರಂ ಮಂಜು ಬಣ್ಣ ಹಚ್ಚಿದ್ದು, ಸಾಲು ಸಾಲು ಒದ್ದಾಟ ಅನುಭವಿಸುವ, ವೈಫಲ್ಯಗಳನ್ನು ಎದುರಿಸಿಕೊಂಡು ಗುರಿ ಬೆನ್ನುಟ್ಟುವ ಗಟ್ಟಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನಾಯಕ ಮನು ಮತ್ತು ಕಿಟ್ಟಿ ನಡುವೆ ಹೈವೋಲ್ಟೇಜ್ ಸೀಕ್ವೆನ್ಸ್  ಸಿನಿಮಾದಲ್ಲಿದೆ. ಮಂಜು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವುದರ ಜೊತೆಗೆ ಕಾರ್ಯಕಾರಿ ನಿರ್ಮಾಪಕನಾಗಿ, ಕಲಾ ವಿನ್ಯಾಸಕನಾಗಿಯೂ ತಂಡದ ಜೊತೆ ಜವಾಬ್ದಾರಿಯನ್ನ ಹಂಚಿಕೊಂಡಿದ್ದಾರೆ.

ನೈಜ ಘಟನೆ ಹಾಗೂ ಕಾಲ್ಪನಿಕತೆ ಕಥಾಹಂದರ ಸುತ್ತ ಸಾಗುವ ದೂರದರ್ಶನ ಸಿನಿಮಾದಲ್ಲಿ ಪೃಥ್ವಿ ಅಂಬರ್ ನಾಯಕನಾಗಿ ನಟಿಸಿದ್ದು, ಅಯಾನಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಸೇರಿದಂತೆ ಮತ್ತಿತರರ ತಾರಾಗಣ ಸಿನಿಮಾದಲ್ಲಿದೆ.

ಸುಕೇಶ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗುತ್ತಿರುವ “ದೂರದರ್ಶನ” ಚಿತ್ರ ಈಗಷ್ಟೇ ಡಬ್ಬಿಂಗ್ ಮುಗಿಸಿ  ಶೀಘ್ರದಲ್ಲಿ ತೆರೆಗೆ ತರಲು ಚಿತ್ರ ತಂಡ  ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ.

 ಸಿನಿಮಾವನ್ನು ವಿಎಸ್ ಮೀಡಿಯಾ ಎಂಟರ್ ಪ್ರೈಸಸ್ ಬ್ಯಾನರ್ ನಡಿ ರಾಜೇಶ್ ಭಟ್ ನಿರ್ಮಾಣ ಮಾಡಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ನಂದೀಶ್ ಟಿಜಿ ಸಂಭಾಷಣೆ, ಪ್ರದೀಪ್ ಆರ್ ರಾವ್ ಸಂಕಲನ ಸಿನಿಮಾಕ್ಕಿದೆ. ದೂರದರ್ಶನ ಸಿನಿಮಾದಲ್ಲಿ ನಾಲ್ಕು ಹಾಡುಗಳು, ಎರಡು ಫೈಟ್ ಸೀನ್ಸ್ ಗಳಿದ್ದು, ಹೊಡೆದಾಟದ ದೃಶ್ಯಗಳನ್ನು ನೈಜ ರೀತಿಯಲ್ಲಿ ಚಿತ್ರೀಕರಿಸಲಾಗಿದೆ.  ಶೀಘ್ರದಲ್ಲಿಯೇ ಚಿತ್ರತಂಡ ತೆರೆಗೆ ಬರಲು ಸಜ್ಜಾಗುತ್ತಿದೆ.

🔸 ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/GBc6sg7E2FQLuXblEdBxSi

ಇದನ್ನೂ ನೋಡಿ:https://www.youtube.com/watch?v=UdcJ8D4Ec_I

https://www.facebook.com/peepaltvkannada/videos/614442686798728

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು