ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ವಾಪಸ್‌ ಬಂದ್ರೆ ಕೊಲ್ತೀವಿ: ಶೇಖ್ ಹಸೀನಾರನ್ನು ಎಚ್ಚರಿಸಿದ ಬಾಂಗ್ಲಾ ದೇಶದ ಮುಖ್ಯ ಅಭಿಯೋಜಕ2004ರಲ್ಲಿ ಸೋನಿಯಾ ಗಾಂಧಿ ಪ್ರಧಾನಿ ಹುದ್ದೆ ನಿರಾಕರಿಸಿದ್ದೇಕೆ?; ಸೋನಿಯಾ ಗಾಂಧಿ ಆತ್ಮಕಥನದಲ್ಲಿ ಮಹತ್ವದ ವಿಚಾರ ಬಹಿರಂಗಕರ್ನಾಟಕ ಉರ್ದು ಅಕಾಡೆಮಿಗೆ ಹೆಚ್ಚಿನ ಅನುದಾನ, ಅಲ್ಪಸಂಖ್ಯಾತರ ಸಮಸ್ಯೆಗಳ ಚರ್ಚೆಗೆ ಪ್ರತ್ಯೇಕ ಸಭೆ: ಡಿ.ಕೆ. ಶಿವಕುಮಾರ್ ಭರವಸೆಜಿಟಿ ದೇವೇಗೌಡ ಜೆಡಿಎಸ್‌ನಲ್ಲಿ ಮುಂದುವರಿಯೋದು ಡೌಟ್! ಬಿಜೆಪಿ, ಕಾಂಗ್ರೆಸ್ ಆಫರ್ ಗುಟ್ಟು ರಟ್ಟುಚುನಾವಣಾ ನೀತಿ ಸಂಹಿತೆ: ಮರುನೇಮಕಗೊಂಡ ನಿವೃತ್ತ ಸರ್ಕಾರಿ ಅಧಿಕಾರಿಗಳಿಗೂ ರಾಜಕೀಯ ಚಟುವಟಿಕೆ ನಿಷೇಧ; ಚುನಾವಣಾ ಆಯೋಗದ ಸೂಚನೆಕರ್ನಾಟಕದ 64 ಕ್ಷೇತ್ರಗಳಲ್ಲಿ 8.80 ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರ ಹೆಸರು ಅಳಿಸಲಾಗಿದೆ: ಮುಸ್ಲಿಂ ಒಕ್ಕೂಟ ಆರೋಪಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ಪ್ರಕರಣ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೇಜಸ್ವಿ ಸೂರ್ಯ ತಿರುಗೇಟು; ಮೂರು ದಿನಗಳಲ್ಲಿ ಸಾಕ್ಷ್ಯ ನೀಡುವಂತೆ ಸವಾಲುಭಾವಪುಂಜ – 3 : ಅಡುಗೆಮನೆ ಅಂದು ಇಂದುಬೆಂಗಳೂರು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ವಿಜಯನಗರ ನಿಲ್ದಾಣದಲ್ಲಿ ಹಳಿಗೆ ಹಾರಿದ ಪ್ರಯಾಣಿಕನಾಟಕಕ್ಕೂ ಬೇಕಾ ಪೋಲೀಸ್ ಕಣ್ಗಾವಲು?ರಾಮಾಯಣ ಮತ್ತು ಕರುನಾಡಿನ ಭೌಗೋಳಿಕ ನಂಟುಕಲಬುರಗಿ ಸಮೀಪ ಶರಣರ ವಚನ ಪರಂಪರೆಗೆ ಹೊಸ ಸ್ಪರ್ಶ; ವಚನ ಮಂಟಪ ನಿರ್ಮಾಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆರಾಜ್ಯ ಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ: 35 ತಹಶೀಲ್ದಾರ್‌ಗಳಿಗೆ ಹೊಸ ಜವಾಬ್ದಾರಿಏಳು ಮಂದಿಯ ಭೀಕರ ಹತ್ಯೆ ಪ್ರಕರಣ ಶಿರಾಡಿಘಾಟ್ ಕಂದಕದಲ್ಲಿ – ಬೆಚ್ಚಿ ಬೀಳಿಸುವ ಸಂಗತಿE20 ಪೆಟ್ರೋಲ್ ವಿವಾದಕ್ಕೆ ಮತ್ತೊಂದು ತಿರುವು: 20% ಎಥನಾಲ್ ಎಂದ BPCL ಪೋಸ್ಟ್‌ನಲ್ಲಿ ಕಂಡಿದ್ದು 33%; ತಕ್ಷಣವೇ ಟ್ವಿಟ್ ಡಿಲೀಟ್ಟರ್ಕಿಯ ಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 16 ಕಾರ್ಮಿಕರು ಸಾವು, ಹಲವರಿಗೆ ಗಾಯಐಫೋನ್ ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ದುರಂತ; ವಿಷಕಾರಿ ಅನಿಲ ಸೇವಿಸಿ ಮೂವರು ಕಾರ್ಮಿಕರು ಸಾವು!ಹಾಸನ DC ಹುದ್ದೆಯಲ್ಲಿ ಮುಂದುವರಿಯಲು ₹75 ಲಕ್ಷ ಲಂಚ – ತನಿಖೆಗೆ HDK ಒತ್ತಾಯದೀಪಾವಳಿ ಪಟಾಕಿ ಹಾವಳಿ; ದೆಹಲಿ ವಾಯುಮಾಲಿನ್ಯದ ನಂತರ ಬೆಂಗಳೂರಿನ ಗಾಳಿ ಕಲುಷಿತ!ಮಾಲಿನ್ಯದಲ್ಲಿ ಶೇ.25ರಷ್ಟು ಏರಿಕೆLPG ಕೆ.ಜಿಗೆ 11 ರೂ ಹೆಚ್ಚಳ ಆಟೋ ಚಾಲಕರಿಗೆ – ಗಾಯದ ಮೇಲೆ ಬರೆ

ವಿಜಯ ಪ್ರಸಾದ್ ಹೊಸ ಸಿನಿಮಾದಲ್ಲಿ ರಚಿತಾ ರಾಮ್; ಈ ಬಾರಿ ಡಿಫರೆಂಟ್ ಆಗಿ ಪ್ರೇಕ್ಷಕರ ಮುಂದೆ!

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

ವಿಜಯ ಪ್ರಸಾದ್ ಹೊಸ ಸಿನಿಮಾದಲ್ಲಿ ರಚಿತಾ ರಾಮ್; ಈ ಬಾರಿ ಡಿಫರೆಂಟ್ ಆಗಿ ಪ್ರೇಕ್ಷಕರ ಮುಂದೆ!

ಕನ್ನಡ ಚಿತ್ರರಂಗದ ವಿಭಿನ್ನ ಕಥೆಗಾರ ಹಾಗೂ ನಿರ್ದೇಶಕ ವಿಜಯ ಪ್ರಸಾದ್ ತಮ್ಮ ಮುಂದಿನ ಚಿತ್ರಕ್ಕಾಗಿ ಸಿದ್ಧತೆ ಆರಂಭಿಸಿದ್ದು, ಈ ಸಿನಿಮಾದಲ್ಲಿ ನಟಿ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಲಿದ್ದಾರೆ. ಈ ಹಿಂದೆ ಹಾಸ್ಯಮಿಶ್ರಿತ ವಿಭಿನ್ನ ಕಥೆಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದ ನಿರ್ದೇಶಕರು, ಈ ಬಾರಿ ಭಾವನೆಗಳಿಗೆ ಹೆಚ್ಚಿನ ಒತ್ತು ನೀಡುವ ಪ್ರೇಮಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ರಚಿತಾ ರಾಮ್ ಅವರೊಂದಿಗೆ ಅಚ್ಯುತ್ ಕುಮಾರ್ ಮತ್ತು ರಂಗಾಯಣ ರಘು ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯ ಸುತ್ತ ಸಾಗುವ ಕಥಾಹಂದರದಲ್ಲಿ ಪ್ರೀತಿ, ಸಂಬಂಧಗಳು ಹಾಗೂ ಕುಟುಂಬದ ಭಾವನಾತ್ಮಕ ಸನ್ನಿವೇಶಗಳಿಗೆ ಪ್ರಾಮುಖ್ಯತೆ ಇರಲಿದೆ. ರಚಿತಾ ಅವರಿಗೆ ನಾಯಕನಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ವಿಚಾರವನ್ನು ಚಿತ್ರತಂಡ ಇನ್ನೂ ಬಹಿರಂಗಪಡಿಸಿಲ್ಲ.

ಚಿತ್ರದ ದೃಶ್ಯ ವೈಭವ ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕದ ಹೊರಗಿನ ಹಲವು ಸುಂದರ ತಾಣಗಳನ್ನು ಚಿತ್ರೀಕರಣಕ್ಕೆ ಆಯ್ಕೆ ಮಾಡಿಕೊಳ್ಳುವ ಯೋಜನೆಯಿದೆ. ರಾಜಸ್ಥಾನದ ಮರುಭೂಮಿ ಪ್ರದೇಶಗಳು, ಜಮ್ಮು ಮತ್ತು ಕಾಶ್ಮೀರದ ಪ್ರಕೃತಿ ಸೌಂದರ್ಯ ಹಾಗೂ ಹಿಮಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸುವ ಚಿಂತನೆ ಚಿತ್ರತಂಡಕ್ಕಿದೆ. ವಿದೇಶಿ ತಾಣಗಳನ್ನೂ ಬಳಸಿಕೊಳ್ಳುವ ಸಾಧ್ಯತೆಯಿದೆ.

‘ಸಿದ್ಲಿಂಗು’, ‘ನೀರ್ ದೋಸೆ’, ‘ಪೆಟ್ರೋಮ್ಯಾಕ್ಸ್’ ಮತ್ತು ‘ತೋತಾಪುರಿ’ ಚಿತ್ರಗಳ ಮೂಲಕ ತಮ್ಮದೇ ಆದ ನಿರ್ದೇಶನದ ಛಾಪು ಮೂಡಿಸಿರುವ ವಿಜಯ ಪ್ರಸಾದ್, ಹೊಸ ಸಿನಿಮಾದಲ್ಲಿ ವಿಭಿನ್ನ ಕಥನದೊಂದಿಗೆ ಪ್ರೇಕ್ಷಕರನ್ನು ತಲುಪುವ ಪ್ರಯತ್ನದಲ್ಲಿದ್ದಾರೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು