ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜವರ್ಧನ್ ಈಗ ಗಜರಾಮ, ಕೊಡಗಿನ ಕುವರಿ ತಪಸ್ವಿನಿ ಪೂಣಚ್ಚ ನಾಯಕಿ

P

Peepal Media • ಸಿನಿಮಾ

• 1 ನಿಮಿಷದ ಓದು

ರಾಜವರ್ಧನ್ ಈಗ ಗಜರಾಮ, ಕೊಡಗಿನ ಕುವರಿ ತಪಸ್ವಿನಿ ಪೂಣಚ್ಚ ನಾಯಕಿ

‘ಮ್ಯಾಸಿವ್ ಸ್ಟಾರ್’ ಅಂತ ಹೆಸರು ಇಟ್ಕೊಂಡಿರೋ ರಾಜವರ್ಧನ್ ಈಗ ‘ಗಜರಾಮ’ನಾಗಿ ಅಬ್ಬರಿಸಲು ರೆಡಿಯಾಗಿದ್ದಾರೆ. ಬಿಚ್ಚುಗತ್ತಿ ಚಿತ್ರದ ಮೂಲಕ ಸ್ಯಾಂಡಲ್‌ವುಡ್ ನಲ್ಲಿ ಗುರುತಿಸಿಕೊಂಡಿರುವ ನಟ ಇವರು. ಯುವ ನಿರ್ದೇಶಕ ಸುನೀಲ್ ಕುಮಾರ್ ವಿ.ಎ  ಕಥೆ ಕೇಳಿ ಇಂಪ್ರೆಸ್ ಆಗಿರುವ ರಾಜವರ್ಧನ್ ಗಜರಾಮನಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ಮೂಲಕ ಕಿಕ್ ಕೊಟ್ಟ ‘ಗಜರಾಮ’ನಿಗೆ ಈಗ ನಾಯಕಿಯೂ ಸಿಕ್ಕಿದ್ದಾರೆ.

ರಾಜವರ್ಧನ್ ಜೊತೆ ನಾಯಕಿಯಾಗಿ ಕೊಡಗಿನ ಬೆಡಗಿ ತಪಸ್ವಿನಿ ಪೂಣಚ್ಚ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹರಿಕಥೆ ಅಲ್ಲ ಗಿರಿಕಥೆ ಚಿತ್ರದಲ್ಲಿ ನಾಯಕಿಯಾಗಿ ಗಮನ ಸೆಳೆದಿದ್ದ ತಪಸ್ವಿನಿ ಪೂಣಚ್ಚ ಈಗ ‘ಗಜರಾಮ’ನ ಜೋಡಿಯಾಗಿದ್ದಾರೆ. ಹಾಗಾಗಿ, ನಾಯಕಿಯಾಗಿ ತಪಸ್ವಿನಿಗಿದು ಎರಡನೇ ಸಿನಿಮಾ.

 ಹರಿಕಥೆ ಅಲ್ಲ ಗಿರಿಕಥೆ ಚಿತ್ರಕ್ಕೆ ನಾನು ಸೆಲೆಕ್ಟ್ ಆಗಿದ್ದೇ ಆಕಸ್ಮಿಕವಾಗಿ.  ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅನ್ನೋದು ನನ್ನ ಉದ್ದೇಶ ಆಗಿರಲಿಲ್ಲ. ಆದ್ರೆ ಇನ್‌ಸ್ಟಾಗ್ರಾಮ್ ನಲ್ಲಿ ಒಂದು ಫೋಟೋ ನೋಡಿ ಚಿತ್ರತಂಡ ನನ್ನ ಸಂಪರ್ಕ ಮಾಡಿದ್ರು. ಕಥೆ ಕೇಳಿ ಇಷ್ಟ ಆಯ್ತು ಒಪ್ಪಿಕೊಂಡೆ ಇದೀಗ ‘ಗಜರಾಮ’ ಸಿನಿಮಾ ಅವಕಾಶ ಸಿಕ್ಕಿದೆ. ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ನಂತರ ಸಾಕಷ್ಟು ಸಿನಿಮಾ ಆಫರ್ ಬರ್ತಿದೆ. ಆದರೆ ಗಜರಾಮ ಸಿನಿಮಾ ಪಾತ್ರ ಇಷ್ಟ ಆಯ್ತು. ಹಳ್ಳಿ ಹುಡುಗಿ ಪಾತ್ರದಲ್ಲಿ ಈ ಸಿನಿಮಾದಲ್ಲಿ ನಾನು ಕಾಣಿಸಿಕೊಳ್ಳುತ್ತಿದ್ದೇನೆ ಎನ್ನುತ್ತಾರೆ ನಟಿ ತಪಸ್ವಿನಿ ಪೂಣಚ್ಚ.

ನಿರ್ದೇಶನ ವಿಭಾಗದಲ್ಲಿ ದುಡಿದ ಅನುಭವ ಇರುವ ಸುನೀಲ್ ಕುಮಾರ್ ‘ಗಜರಾಮ’ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಆಕ್ಷನ್ ಮಾಸ್ ಎಂಟರ್ಟೈನರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರಕ್ಕೆ ಮನೋಮೂರ್ತಿ ಸಂಗೀತ, ಕೆ.ಎಸ್.ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್ ನಡಿ ನರಸಿಂಹ ಮೂರ್ತಿ ಚಿತ್ರವನ್ನು ನಿರ್ಮಾಣ ಮಾಡ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಕೂಡ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದೇ ತಿಂಗಳಾಂತ್ಯಕ್ಕೆ ಸಿನಿಮಾ ಸೆಟ್ಟೇರಲಿದೆ.

🔸 ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/GBc6sg7E2FQLuXblEdBxSi

ಇದನ್ನೂ ನೋಡಿ: https://www.youtube.com/watch?v=BZqBOpX0SBw

P

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version