ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ನನಗೇನೂ ಗೊತ್ತೇ ಇಲ್ಲ” ; ‘Me too’ ಬಗ್ಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರಾ ರಜನಿಕಾಂತ್?

P

Peepal Media Desk • ಸಿನಿಮಾ

• 1 ನಿಮಿಷದ ಓದು

“ನನಗೇನೂ ಗೊತ್ತೇ ಇಲ್ಲ” ; ‘Me too’ ಬಗ್ಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರಾ ರಜನಿಕಾಂತ್?

ಇಡೀ ಭಾರತೀಯ ಚಿತ್ರರಂಗವೇ ಮಲಯಾಳಂ ಚಲನಚಿತ್ರೋದ್ಯಮದ “Me too” ವಿವಾದದ ಬಗ್ಗೆ ಮಾತನಾಡಿಕೊಳ್ಳುತ್ತಿರುವಾಗ ಇತ್ತ “ಸೂಪರ್ ಸ್ಟಾರ್” ಬಿರುದಾಂಕಿತ ರಜನಿಕಾಂತ್ ಅತ್ಯಂತ ಬೇಜವಾಬ್ದಾರಿ ಹೇಳಿಕೆ ನೀಡಿದ್ದು ಅಭಿಮಾನಿಗಳು ಮತ್ತು ಚಿತ್ರರಂಗದ ಮಂದಿಯೇ ಹುಬ್ಬೇರಿಸುವಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಮಲಯಾಳಂ ಚಿತ್ರರಂಗದ ಅನೇಕ ನಟಿಯರು ತಮಗಾಗಿರುವ ಲೈಂಗಿಕ ಕಿರುಕುಳದ ಬಗ್ಗೆ ಎಲ್ಲೆಡೆ ಹೇಳಿಕೊಳ್ಳುತ್ತಿರುವಾಗ, ಇದೇ ಪ್ರಕರಣದ ಬಗ್ಗೆ ಹೇಮಾ ಸಮಿತಿ ನೀಡಿದ ವರದಿ (Hema Committee Report) ಬಗ್ಗೆ ಇದೀಗ ದೇಶದೆಲ್ಲೆಡೆ ಚರ್ಚೆ ಆಗ್ತಿದೆ. ಈ ವಿಚಾರದಲ್ಲಿ ಇಡೀ ಕೇರಳದಲ್ಲಿ ದೊಡ್ಡ ಬಿರುಗಾಳಿಯೇ ಎದ್ದಿರುವಾಗ ನಟ ರಜನಿಕಾಂತ್ “ಈ ಬಗ್ಗೆ ನನಗೆ ಗೊತ್ತೇ ಇಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಭಾನುವಾರ ಹೇಮಾ ಸಮಿತಿ ವರದಿ ಕುರಿತು ತಮಿಳುನಾಡಿನ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಸುದ್ದಿಗಾರರು ಪ್ರಶ್ನಿಸಿದ್ದಾರೆ. ಆದರೆ ನಟ ರಜನಿಕಾಂತ್ ಈ ಬಗ್ಗೆ ನನಗೆ ಯಾವುದೂ ಗೊತ್ತಿಲ್ಲ, ನನಗೇನೂ ತಿಳಿದಿಲ್ಲ ಎಂದಿದ್ದಾರೆ. ಅಲ್ಲದೇ ತಮಿಳು ಚಿತ್ರರಂಗಕ್ಕೂ ಇಂತಹದ್ದೊಂದು ಕಮಿಟಿ ಅಗತ್ಯವಿದೆಯೋ? ಇಲ್ಲವೋ? ಅನ್ನೋದು ಕೂಡ ನನಗೆ ತಿಳಿದಿಲ್ಲ ಎಂದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇನ್ನೊಂದು ಕಡೆ ತೆಲುಗು ಚಿತ್ರರಂಗದ ಬಗ್ಗೆ ನಟಿ ಸಮಂತಾ, ತಮಿಳು ಚಿತ್ರರಂಗದ ಬಗ್ಗೆ ನಟ ವಿಶಾಲ್ ಅವರು ನಮ್ಮ ನಮ್ಮ ಚಿತ್ರರಂಗಕ್ಕೂ ಇಂತಹದ್ದೊಂದು ಕಮಿಟಿ ಅಗತ್ಯವಿದೆ ಎಂದು ದನಿಗೂಡಿಸಿದ್ದಾರೆ. ಚಿತ್ರರಂಗದಲ್ಲಿ ಹೆಣ್ಣು ಮಕ್ಕಳು ಅನುಭವಿಸುತ್ತಿರುವ ಸಂಕಷ್ಟಗಳು ಮತ್ತು ಲೈಂಗಿಕ ಕಿರುಕುಳದ ಬಗ್ಗೆ ಸಮಿತಿ ರಚನೆಯಾಗಬೇಕು ಎಂದು ಎಂದು ದೊಡ್ಡ ಕೂಗು ಎದ್ದಿದ್ದು, ಇದರ ಬಗ್ಗೆ ರಜನಿಕಾಂತ್ ತೀರಾ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ನಟಿಯರಾದ ರಾಧಿಕಾ ಶರತ್​ ಕುಮಾರ್​, ಖುಷ್ಬೂ, ರಂಜನಿ, ಅಮಲಾಪಾಲ್, ಸಮಂತಾ ಕೂಡ ಈ ವರದಿಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಆದ್ರೆ, ಕೇರಳದ ಹಿರಿಯ ನಟರಾದ ಮೋಹನ್ ಲಾಲ್ ಮತ್ತು ಮಮ್ಮುಟ್ಟಿ ಈ ವಿಷಯದ ಬಗ್ಗೆ ಮೌನವಾಗಿದ್ದವರು, ತೀವ್ರ ಟೀಕೆಗಳು ಬಂದ ಬಳಿಕ ಒಬ್ಬರ ಹಿಂದೆ ಒಬ್ಬರಂತೆ ಮೋಹನ್ ಲಾಲ್ ಮತ್ತು ಮಮ್ಮುಟ್ಟಿ ಹೇಮಾ ಸಮಿತಿ ವರದಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. 

P

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version