ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಣ ಚಿತ್ರದ ಗಲ್ಲಿ ಬಾಯ್, ಜೋಗಿ ಪ್ರೇಮ್ ಕೈಯಲ್ಲಿ ಹಾಡು ಬಿಡುಗಡೆ

PPeepal Media

Peepal Media ಸಿನಿಮಾ

• 1 ನಿಮಿಷದ ಓದು

ರಾಣ ಚಿತ್ರದ ಗಲ್ಲಿ ಬಾಯ್, ಜೋಗಿ ಪ್ರೇಮ್ ಕೈಯಲ್ಲಿ ಹಾಡು ಬಿಡುಗಡೆ

ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ , ನಂದಕಿಶೋರ್ ನಿರ್ದೇಶನದ “ರಾಣ”  ಚಿತ್ರದ “ಗಲ್ಲಿ ಬಾಯ್” ಹಾಡನ್ನು ಇತ್ತೀಚೆಗೆ ಜೋಗಿ ಪ್ರೇಮ್ ಬಿಡುಗಡೆ ಮಾಡಿದ್ದಾರೆ. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ.

ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ಶ್ರೇಯಸ್ ಹಾಗೂ ರೀಷ್ಮಾ ನಾಣಯ್ಯ ಇಬ್ಬರೂ ಚೆನ್ನಾಗಿ ನೃತ್ಯ ಮಾಡಿದ್ದಾರೆ. ಚಂದನ್ ಶೆಟ್ಟಿ ಸಂಗೀತ ಸುಂದರವಾಗಿದೆ. ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಗಾಯನ ಸುಮಧುರವಾಗಿದೆ. ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಜೋಗಿ ಪ್ರೇಮ್ ಹಾರೈಸಿದರು.

ಮೊದಲು ನಾನು, ನನ್ನ ಸ್ಪೂರ್ತಿಯಾದ ವಿಷ್ಣುವರ್ಧನ್ ಹಾಗೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇನೆ. ಚಂದನ್ ಶೆಟ್ಟಿ  ಎಲ್ಲರ ಮನಸಿಗೆ ಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಅನಿರುಧ್ದ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಅವರ ಅದ್ಭುತ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ. ನವೆಂಬರ್11 ರಂದು ಚಿತ್ರ ತೆರೆಗೆ ಬರಲಿದೆ.‌ ಹಾಡು ಬಿಡುಗಡೆ ಮಾಡಿಕೊಟ್ಟ ಪ್ರೇಮ್ ಅವರಿಗೆ ಹಾಗೂ ಅವಕಾಶ ನೀಡಿರುವ ನಿರ್ಮಾಪಕ ಪುರುಷೋತ್ತಮ್ ಹಾಗೂ ನಿರ್ದೇಶಕ ನಂದಕಿಶೋರ್ ಅವರಿಗೆ ಧನ್ಯವಾದ ಎಂದರು ನಾಯಕ ಶ್ರೇಯಸ್.

ಗುಜ್ಜಲ್ ಪುರುಷೋತ್ತಮ್ ಅವರು ಒಂದು ಸಿನಿಮಾ ಮಾಡುತ್ತಿದ್ದೇನೆ. ನೀವು ಜೊತೆಗಿರಬೇಕು ಎಂದರು.  ನನ್ನ ಮಗನೇ ಹೀರೋ ಅಂತ ತಿಳಿದ ಮೇಲೆ, ನಾನು ಅವನಿಗೆ ಚಿತ್ರ ಚೆನ್ನಾಗಿ ಬರಲು ನಿರ್ದೇಶಕರು ಕಾರಣ ಅವರು ಹೇಳಿದ ಹಾಗೆ ಕೇಳಬೇಕು ಅಂತ ಹೇಳಿದೆ. “ರಾಣ” ಒಂದೊಳ್ಳೆಯ ಕೌಟುಂಬಿಕ ಚಿತ್ರ.  ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆಯಿದೆ. ನಂದಕಿಶೋರ್ ನಿರ್ದೇಶನ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಸೇರಿದಂತೆ ಎಲ್ಲರ ಕೆಲಸ ಚೆನ್ನಾಗಿದೆ. ನವೆಂಬರ್ 11 ಚಿತ್ರ ತೆರೆಗೆ ಬರುತ್ತಿದೆ ಎಂದು ತಿಳಿಸಿದ ಕೆ.ಮಂಜು, ಹಾಡು ಬಿಡುಗಡೆ ಮಾಡಲು ದೂರದ ಮುಂಬೈನಿಂದ ಬಂದ ಪ್ರೇಮ್ ಅವರಿಗೆ ಧನ್ಯವಾದ ಹೇಳಿದರು.

ಕೆ.ಮಂಜು ಅವರ ಸಹಕಾರದಿಂದ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನನ್ನ ಧನ್ಯವಾದ ಎಂದರು ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್.

ನಂದಕಿಶೋರ್ ನಿರ್ದೇಶನದಲ್ಲಿ ಚಿತ್ರ  ಚೆನ್ನಾಗಿ ಬಂದಿದೆ. ಹಾಡುಗಳು ಸುಂದರವಾಗಿದೆ. ಇದೇ ಮೊದಲ ಬಾರಿಗೆ ನಾನು ಹಿನ್ನೆಲೆ ಸಂಗೀತ ಕೂಡ ನೀಡಿದ್ದೇನೆ ಎಂದು ಸಂಗೀತದ ಬಗ್ಗೆ ಚಂದನ್ ಶೆಟ್ಟಿ ಮಾಹಿತಿ ನೀಡಿದರು.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು