ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮಸ್ತ್ ಮಲೈಕಾಗೆ ಸಾನ್ವಿ ಸುದೀಪ್ ಧ್ವನಿ…ಮಗಳ ಧ್ವನಿಗೆ ಕಿಚ್ಚನ ಜರ್ಬದಸ್ತ್ ಕುಣಿತ

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

ಮಸ್ತ್ ಮಲೈಕಾಗೆ ಸಾನ್ವಿ ಸುದೀಪ್ ಧ್ವನಿ…ಮಗಳ ಧ್ವನಿಗೆ ಕಿಚ್ಚನ ಜರ್ಬದಸ್ತ್ ಕುಣಿತ

ಮಾರ್ಕ್ ಮಸ್ತ್ ಮಲೈಕಾಗೆ ಕಂಠ ಕುಣಿಸಿದ ಕಿಚ್ಚ ಪುತ್ರಿ..ಸಾನ್ವಿ ಸುದೀಪ್ ಹಾಡಿಗೆ ಬಾದ್ ಷಾ ಬೊಂಬಾಟ್ ಸ್ಟೆಪ್ಸ್

ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಮಾರ್ಕ್ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಮ್ಯಾಕ್ಸ್ ಸಕ್ಸಸ್ ಬಳಿಕ‌ ಕಿಚ್ಚ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯ ಈ ಪ್ರಾಜೆಕ್ಟ್ ಗಾಗಿ ಕೈ ಜೋಡಿಸಿದ್ದಾರೆ. ಈಗಾಗಲೇ ಟ್ರೇಲರ್ ಮೂಲಕ ಅಭಿಮಾನಿ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿರುವ ಮ್ಯಾಕ್ಸ್ ಚಿತ್ರದ ಪಾರ್ಟಿ ಹಾಡು ಭರ್ಜರಿ ಸೌಂಡ್ ಮಾಡ್ತಿದೆ.

ಮಾರ್ಕ್ ಸಿನಿಮಾದ ಮಸ್ತ್ ಮಲೈಕಾ ಸಾಂಗ್ ಗೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಅದರಲ್ಲಿಯೂ ಸಾನ್ವಿ ಸುದೀಪ್ ಕಂಠಕ್ಕೆ‌ ಸಂಗೀತ ಪ್ರಿಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮಸ್ತ್ ಮಲೈಕಾ ಹಾಡಿಗೆ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಧ್ವನಿ ನೀಡಿದ್ದಾರೆ. ಮಗಳ ಕಂಠಕ್ಕೆ ಕಿಚ್ಚ‌ ಬೊಂಬಾಟ್ ಸ್ಟೆಪ್ಸ್ ಹಾಕಿದ್ದಾರೆ.

ಸಾನ್ವಿ ಸುದೀಪ್ ಮೊದಲ ಹಾಡು
ಮಸ್ತ್ ಮಲೈಕಾ ಸಾನ್ವಿ ಅವರ ಮೊದಲ ಹಾಡು ಅನ್ನೋದು ವಿಶೇಷ. ಸಿನಿಮಾ ರಂಗದಲ್ಲಿ ಅಥವಾ ಸಂಗೀತ ಕ್ಷೇತ್ರದಲ್ಲಿ ಏನಾದರೂ ಮಾಡಬೇಕು ಎಂಬುವುದು ಸಾನ್ವಿ ಕನಸಂತೆ. ಆ ಕನಸಿನಂತೆ ಅವರು ಸಾಗುತ್ತಿದ್ದಾರೆ. ಅದು ಅಪ್ಪನ ಚಿತ್ರದ ಮೂಲಕ ಪೂರ್ಣ ಪ್ರಮಾಣದ ಗಾಯಕಿಯಾಗಿ ಸಾನ್ವಿ ಹೊರ ಹೊಮ್ಮಿದ್ದಾರೆ.

ತೆಲುಗಿನ ನಾನಿ‌ ಚಿತ್ರಕ್ಕೂ ಸಾನ್ವಿ ಗಾಯನ
ಈ ಹಿಂದೆ ನಟ ನಾನಿ ಅಭಿನಯದ ‘ಹಿಟ್ 3’ ಚಿತ್ರದ ಮೂಲಕ ಸಾನ್ವಿ ಸುದೀಪ್ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಹಿಟ್ 3 ರ ಥೀಮ್ ಸಾಂಗ್ ‘ಪೊರಟಮೆ 3.0’ ಗೆ ಸಾನ್ವಿ ಧ್ವನಿ ನೀಡಿದ್ದಾರೆ. ಇದೀಗ ತನ್ನ ತಂದೆ ನಟಿಸಿರುವ ಚಿತ್ರದ ಮೂಲಕವೇ ಸಾನ್ವಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ.‌

ಈ ಹಾಡು ಬಿಡುಗಡೆ ಕುರಿತು ನಟ ಕಿಚ್ಚ ಸುದೀಪ್, ನನ್ನ ಎಲ್ಲಾ ಬಾದ್‌ಶಾಗಳಿಗೆ..ನಿಮ್ಮ ಕುಟುಂಬದ ಸದಸ್ಯರಾದ ಸಾನ್ವಿ ಅವರ ಮೊದಲ ಹಾಡನ್ನು ಪ್ರಸ್ತುತಪಸುತ್ತಿದ್ದೇವೆ. ಮಾರ್ಕ್ ಚಿತ್ರತಂಡಿಂದ ಈ ಹಾಡನ್ನು  ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಉಡುಗೊರೆಯಾಗಿ ನೀಡುತ್ತಿದ್ದೇವೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

‘ಸತ್ಯ ಜ್ಯೋತಿ ಫಿಲ್ಮ್ಸ್’ ಮತ್ತು ‘ಕಿಚ್ಚ ಕ್ರಿಯೇಷನ್’ ಮೂಲಕ  ಮಾರ್ಕ್ ಸಿನಿಮಾ ನಿರ್ಮಾಣ ಆಗಿದೆ. ಸುದೀಪ್ ಜೊತೆ ದೀಪ್ಷಿಕಾ, ನವೀನ್ ಚಂದ್ರ, ರೋಶಿನಿ ಪ್ರಕಾಶ್, ಗುರು ಸೋಮಸುಂರಂ, ಗೋಪಾಲಕೃಷ್ಣ ದೇಶಪಾಂಡೆ, ಡ್ರ್ಯಾಗನ್ ಮಂಜು, ಅರ್ಚನಾ ಕೊಟ್ಟಿಗೆ, ಮಹಾಂತೇಶ್ ಹಿರೇಮಠ್, ಶೈನ್ ಟಾಮ್ ಚಾಕೋ , ಯೋಗಿ ಬಾಬು ಮುಂತಾದವರು ನಟಿಸಿದ್ದಾರೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು