ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂಸಾರ ಸಮೇತ ನೋಡಿ ಎಂದ ಸೆನ್ಸಾರ್, ‘ಗುರು ಶಿಷ್ಯರು’ ಚಿತ್ರಕ್ಕೆ ‘ಯು’ ಸರ್ಟಿಫಿಕೇಟ್

PPeepal Media

Peepal Media ಸಿನಿಮಾ

• 1 ನಿಮಿಷದ ಓದು

ಸಂಸಾರ ಸಮೇತ ನೋಡಿ ಎಂದ ಸೆನ್ಸಾರ್, ‘ಗುರು ಶಿಷ್ಯರು’ ಚಿತ್ರಕ್ಕೆ ‘ಯು’ ಸರ್ಟಿಫಿಕೇಟ್

ಮೇಷ್ಟ್ರು ಮತ್ತು ವಿದ್ಯಾರ್ಥಿಗಳ ನಡುವೆ ಹೆಣೆಯಲಾಗಿರುವ ಕಥೆ ಇರೋ ಗುರು ಶಿಷ್ಯರು ಸಿನಿಮಾಗೆ ಸೆನ್ಸಾರ್ ನಿಂದ ಯು ಸರ್ಟಿಫಿಕೇಟ್ ಸಿಕ್ಕಿದೆ. ಅದರ ಅರ್ಥ ಈ ಚಿತ್ರದಲ್ಲಿ ಸಾರ್ ಆಗಿ ಕಾಣಿಸಿಕೊಂಡಿರುವ, ಅಂದ್ರೆ ಮೇಷ್ಟ್ರ ಪಾತ್ರದಲ್ಲಿ ಕಾಣಿಸಿಕೊಂಡಿರುವ ಶರಣ್ ವಿದ್ಯಾರ್ಥಿಗಳಿಗೆ ಯಾವ ಕೆಟ್ಟ ಮಾತಲ್ಲೂ ಬೈದಿಲ್ಲ ಅನ್ನೋದಂತೂ ಕನ್ಫರ್ಮ್

ಹೌದು, ಶರಣ್ ಅಭಿನಯದ ಅತೀ ನಿರೀಕ್ಷೆಯ ‘ಗುರು ಶಿಷ್ಯರು’ ಚಿತ್ರವನ್ನು ಶುಕ್ರವಾರ ಪ್ರಾದೇಶಿಕ ಸೆನ್ಸಾರ್ ಮಂಡಳಿಯು ವೀಕ್ಷಿಸಿ, ಯಾವುದೇ ಕಟ್ ಅಥವಾ ಮ್ಯೂಟ್ಗಳಿಲ್ಲದೆ ‘ಯು’ ಪ್ರಮಾಣಪತ್ರ ನೀಡಿದೆ. ಚಿತ್ರವನ್ನು ಬಹಳ ಇಷ್ಟಪಟ್ಟಿರುವ ಸೆನ್ಸಾರ್ ಮಂಡಳಿಯ ಸದಸ್ಯರು, ಇದೊಂದು ಮನೆಮಂದೆಯೆಲ್ಲಾ ಒಟ್ಟಾಗಿ ಕುಳಿತು ನೋಡುವ ಮನರಂಜನಾತ್ಮಕ ಚಿತ್ರ ಎಂದು ಪ್ರಶಂಸಿಸಿದ್ದಾರೆ. ಅಷ್ಟೇ ಅಲ್ಲ, ಇಂಥದ್ದೊಂದು ಪ್ರಾಮಾಣಿಕ ಪ್ರಯತ್ನವನ್ನು ಮಾಡಿರುವ ಚಿತ್ರತಂಡದವರ ಬೆನ್ನು ತಟ್ಟಿದ್ದಾರೆ.

‘ಗುರು ಶಿಷ್ಯರು’ ಚಿತ್ರವನ್ನು ಲಡ್ಡು ಸಿನಿಮಾ ಹೌಸ್ ಮತ್ತು ತರುಣ್ ಸುಧೀರ್ ಕ್ರಿಯೇಟಿವ್ ಸಂಸ್ಥೆಗಳಡಿ ಜಂಟಿಯಾಗಿ ನಿರ್ಮಿಸಲಾಗಿದೆ. ಮುಂದಿನ ಶುಕ್ರವಾರ (ಸೆ.23) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರದ ಎಲ್ಲ ಪ್ರದೇಶದ ಹಕ್ಕುಗಳು ಈಗಾಗಲೇ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ. 2 ಗಂಟೆ 40 ನಿಮಿಷಗಳ ಅವಧಿಯ ಈ ಚಿತ್ರವು 90ರ ದಶಕದ ಕಾಲಘಟ್ಟದ ಕಥೆಯೊಂದನ್ನು ಹೊಂದಿದೆ. ಗ್ರಾಮೀಣ ಕರ್ನಾಟಕದ ಪುಟ್ಟ ಊರೊಂದರಲ್ಲಿ ನಡೆಯುವ ಈ ಕಥೆಯಲ್ಲಿ ಖೋಖೋ ಕ್ರೀಡೆಯು ಪ್ರಮುಖ ಪಾತ್ರವಹಿಸಲಿದ್ದು, ಶರಣ್ ಶಿಕ್ಷಕರಾಗಿ ಅಭಿನಯಿಸುತ್ತಿದ್ದಾರೆ. ಅವರೊಂದಿಗೆ ನಿಶ್ವಿಕಾ ನಾಯ್ಡು, ದತ್ತಣ್ಣ, ಸುರೇಶ್ ಹೆಬ್ಳೀಕರ್, ಅಪೂರ್ವ ಕಾಸರವಳ್ಳಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರದಲ್ಲಿ ಶರಣ್ ಗುರುವಾಗಿ ನಟಿಸಿದರೆ, ಅವರಿಗೆ ಶಿಷ್ಯಂದಿರಾಗಿ ಅವರ ಮಗ ಹೃದಯ್, ‘ನೆನಪಿರಲಿ’ ಪ್ರೇಮ್ ಮಗ ಏಕಾಂತ್, ರವಿಶಂಕರ್ ಗೌಡ ಮಗ ಸೂರ್ಯ, ನವೀನ್ ಕೃಷ್ಣ ಮಗ ಹರ್ಷಿತ್ ಮತ್ತು ಬುಲೆಟ್ ಪ್ರಕಾಶ್ ಮಗ ರಕ್ಷತ್ ನಟಿಸಿದ್ದಾರೆ.

‘ಗುರು ಶಿಷ್ಯರು’ ಚಿತ್ರವು ಶರಣ್ ನಿರ್ಮಾಣದ ಮೂರನೆಯ ಚಿತ್ರವಾಗಿದ್ದು, ನಟ-ನಿರ್ದೇಶಕ ತರುಣ್ ಸುಧೀರ್ ನಿರ್ಮಾಣದ ಮೊದಲ ಚಿತ್ರವಾಗಿದೆ. ನಿರ್ಮಾಣದ ಜೊತೆಗೆ ಈ ಚಿತ್ರದ ಕ್ರಿಯೇಟಿವ್ ಹೆಡ್ ಆಗಿಯೂ ತರುಣ್ ಕೆಲಸ ಮಾಡಿದ್ದಾರೆ. ಈ ಹಿಂದೆ ಪ್ರಜ್ವಲ್ ದೇವರಾಜ್ ಅಭಿನಯದ ‘ಜೆಂಟಲ್ಮ್ಯಾನ್’ ಚಿತ್ರವನ್ನು ನಿರ್ದೇಶಿಸಿದ್ದ ಜಡೇಶ್ ಹಂಪಿ, ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಾಸ್ತಿ ಮಂಜು ಅವರ ಸಂಭಾಷಣೆ, ಸುಧಾಕರ್ ಶೆಟ್ಟಿ ಅವರ ಛಾಯಾಗ್ರಹಣ, ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ ಮತ್ತು ಅಜನೀಶ್ ಲೋಕನಾಥ್ ಸಂಗೀತ ಈ ಚಿತ್ರಕ್ಕಿದೆ.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು