ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

NBK 108ನೇ ಚಿತ್ರಕ್ಕೆ ಶೈನ್ ಸ್ಕ್ರೀನ್ಸ್ ನಿರ್ಮಾಣ

PPeepal Media Desk

Peepal Media Desk • ಸಿನಿಮಾ

• 1 ನಿಮಿಷದ ಓದು

NBK 108ನೇ ಚಿತ್ರಕ್ಕೆ ಶೈನ್ ಸ್ಕ್ರೀನ್ಸ್ ನಿರ್ಮಾಣ

ಬೆಂಗಳೂರು: ಗಾಡ್ ಆಫ್ ಮಾಸ್ ಎಂದೇ ಕರೆಸಿಕೊಳ್ಳೋ ತೆಲುಗು ನಟ ನಂದಮುರಿ ಬಾಲಕೃಷ್ಣ 108ನೇ ಸಿನಿಮಾ ಇಂದು ಅದ್ದೂರಿಯಾಗಿ ಸೆಟ್ಟೇರಿದೆ. ಬಾಲಕೃಷ್ಣ 108ನೇ ಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಇಬ್ಬರ ಕ್ರೇಜಿ ಕಾಂಬಿನೇಶನ್ ನಲ್ಲಿ  ಮೂಡಿ ಬರುತ್ತಿರುವ ಪ್ಯಾನ್ ಇಂಡಿಯಾ ಚಿತ್ರಕ್ಕೆ ಶೈನ್ ಸ್ಕ್ರೀನ್ಸ್ ಬ್ಯಾನರ್ ನಡಿ ಸಾಹು ಗರಪಟಿ ಮತ್ತು ಹರೀಶ್ ಪೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.

NBK108ನೇ ಚಿತ್ರಕ್ಕೆ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದ್ದು, ನಿರ್ಮಾಪಕ ದಿಲ್ ರಾಜು ಕ್ಯಾಮೆರಾ ಚಾಲನೆ, ಲೆಜೆಂಡರಿ ನಿರ್ದೇಶಕ ಕೆ.ರಾಘವೇಂದ್ರ ರಾವ್ ಮುಹೂರ್ತ ಸೀನ್ ಗೆ ಆಕ್ಷನ್ ಕಟ್ ಹೇಳುವ ಮೂಲಕ ಅದ್ದೂರಿಯಾಗಿ ಚಾಲನೆ ನೀಡಲಾಗಿದೆ.   

ಬಾಲಕೃಷ್ಣ ಅಭಿನಯದ 108ನೇ ಸಿನಿಮಾ ಇದಾಗಿದ್ದು, ಪ್ಯಾನ್ ಇಂಡಿಯಾ ಸಿನಿಮಾವಾಗಿ ಈ ಚಿತ್ರ ಮೂಡಿ ಬರುತ್ತಿದೆ. ಸದ್ಯದಲ್ಲೇ ಚಿತ್ರತಂಡ ಟೈಟಲ್ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದೆ. ಇಂದಿನಿಂದಲೇ ಚಿತ್ರೀಕರಣ ಆರಂಭವಾಗಲಿದ್ದು, ಆಕ್ಷನ್ ಸೀನ್ ನೊಂದಿಗೆ ಚಿತ್ರೀಕರಣ ಆರಂಭವಾಗಲಿದೆ. ಆಕ್ಷನ್ ಸೀನ್ ಸೆರೆ ಹಿಡಿಯಲೆಂದೇ ರಾಜೀವನ್ ಅವರ ನೇತೃತ್ವದಲ್ಲಿ ದೊಡ್ಡ ಸೆಟ್ ಗಳನ್ನು ನಿರ್ಮಾಣ ಮಾಡಲಾಗಿದ್ದು, ಖ್ಯಾತ ಸಾಹಸ ನಿರ್ದೇಶಕ ವಿ. ವೆಂಕಟ್ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಆಕ್ಷನ್ ಹಾಗೂ ಮಾಸ್ ಎಲಿಮೆಂಟ್ ಒಳಗೊಂಡ ಈ ಚಿತ್ರಕ್ಕೆ ಬಾಲಕೃಷ್ಣ ಅವರ ಮಾಸ್ ಇಮೇಜ್, ಸ್ಟಾರ್ ಡಂ ಎಲ್ಲವನ್ನು ಗಮನದಲ್ಲಿಟ್ಟುಕೊಂಡೇ ಅನಿಲ್ ರವಿಪುಡಿ ಪವರ್ ಫುಲ್ ಕಥೆ ಹೆಣೆದಿದ್ದಾರೆ. ಚಿತ್ರದಲ್ಲಿ ಕನ್ನಡದ ನಟಿ ಶ್ರೀಲೀಲಾ ಹೀರೋಯಿನ್ ಆಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಎಸ್. ತಮನ್ ಸಂಗೀತ ನಿರ್ದೇಶನವಿದೆ.  ಬಾಲಕೃಷ್ಣ, ಅನಿಲ್ ರವಿಪುಡಿ, ಎಸ್.ತಮನ್ ಈ ಮೂರು ಕಾಂಬಿನೇಶನ್ ಒಂದಾಗಿರೋ ಈ ಚಿತ್ರದ ಮೇಲೆ ಬಾಲಯ್ಯ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿ.ರಾಮ್ ಪ್ರಸಾದ್ ಕ್ಯಾಮೆರಾ ನಿರ್ದೇಶನ, ತಮ್ಮಿ ರಾಜು ಸಂಕಲನ ಚಿತ್ರಕ್ಕಿದೆ. ಸದ್ಯದಲೇ ಸಿನಿಮಾ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು