ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ತ್ರಿಬಲ್ ರೈಡಿಂಗ್” ನಲ್ಲಿ ಜಾಲಿ ಸಾಂಗ್, ಮಂಗ್ಲಿ ಚಂದನ್ ಶೆಟ್ಟಿ ವಾಯ್ಸ್

PPeepal Media

Peepal Media • ಸಿನಿಮಾ

• 1 ನಿಮಿಷದ ಓದು

“ತ್ರಿಬಲ್ ರೈಡಿಂಗ್” ನಲ್ಲಿ ಜಾಲಿ ಸಾಂಗ್, ಮಂಗ್ಲಿ ಚಂದನ್ ಶೆಟ್ಟಿ ವಾಯ್ಸ್

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ತ್ರಿಬಲ್ ರೈಡಿಂಗ್” ಚಿತ್ರದ “ಯಟ್ಟಾ ಯಟ್ಟಾ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಂದನ್ ಶೆಟ್ಟಿ ಈ ಹಾಡನ್ನು ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಹಾಡಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.  ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು.

ನಾನು “ಮುಂಗಾರು‌ ಮಳೆ” ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ ಕೂಡಿ ಬಂದಿದೆ. “ತ್ರಿಬಲ್ ರೈಡಿಂಗ್” ಸ್ವಮೇಕ್ ಚಿತ್ರ. ಆಕ್ಷನ್, ಥ್ರಿಲ್ಲರ್, ಕಾಮಿಡಿ, ಸ್ವಲ್ಪ ಸೆಂಟಿಮೆಂಟ್ ಹಾಗೂ ಸಸ್ಪೆನ್ಸ್ ಎಲ್ಲವೂ ಇದೆ. ನಾಲ್ಕು  ಹಾಡುಗಳಿದೆ‌. ಆದರಲ್ಲಿ ಒಂದು ಹಾಡು ಇಂದು ಬಿಡುಗಡೆಯಾಗಿದೆ. ಇನ್ನೂ ಮೂರು ಹಾಡುಗಳು ಒಂದಕ್ಕಿಂತ ಒಂದು ಚೆನ್ನಾಗಿದೆ. ಸಾಯಿಕಾರ್ತಿಕ್ ಈ ಸಂಗೀತ ನಿರ್ದೇಶಕರು. ಇಂದು ಬಿಡುಗಡೆಯಾಗಿರುವ ಈ ಹಾಡನ್ನು ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಸುಮಧುರವಾಗಿ ಹಾಡಿದ್ದಾರೆ. ಅಂದುಕೊಂಡ ಹಾಗೆ ಸಿನಿಮಾ‌ ಮಾಡಿದ್ದೇವೆ. ಅದಕ್ಕೆ ಕಾರಣರಾದ ನಿರ್ಮಾಪಕ ರಾಮ್ ಗೋಪಾಲ್ ಅವರಿಗೆ ಧನ್ಯವಾದ. ನಿಮ್ಮೆಲ್ಲರ ಹಾರೈಕೆಯಿರಲಿ ಎಂದರು ನಿರ್ದೇಶಕ ಮಹೇಶ್ ಗೌಡ.

ನಿರ್ದೇಶಕ ಮಹೇಶ್ ನನಗೆ “ಮುಂಗಾರು ಮಳೆ” ಯಿಂದ ಪರಿಚಯ. ಆ ಚಿತ್ರಕ್ಕೆ ಅವರು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆಗಲೇ ನನಗೆ ಒಂದು ಕಥೆ ಮಾಡುತ್ತೀನಿ ಎಂದಿದ್ದರು‌. ಹದಿನಾಲ್ಕು ವರ್ಷಗಳ ನಂತರ ಕಥೆ ಮಾಡಿಕೊಂಡು ಬಂದರು. ಒಳ್ಳೆಯ ಪಾತ್ರ ಕೊಟ್ಟಿರುವುದಕ್ಕೆ ಧನ್ಯವಾದ. ಮೊದಲ ಬಾರಿ ನಿರ್ಮಾಣ ಮಾಡಿರುವ ರಾಮ್ ಗೋಪಾಲ್ ಅವರಿಗೆ ಒಳ್ಳೆಯದಾಗಲಿ. ಚಿತ್ರದ ಆರಂಭದಿಂದ ಕೊನೆಯವರೆಗೂ ಸಾಕಷ್ಟು ಟ್ವಿಸ್ಟು, ಟರ್ನ್ ಗಳಿರುತ್ತವೆ. ಇದೊಂದು ಪಕ್ಕಾ ಕಾಮಿಡಿ ಚಿತ್ರ. ಅದರಲ್ಲೂ ಚಿತ್ರದ ಕೊನೆಯ ಇಪ್ಪತ್ತು ನಿಮಿಷ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತದೆ. “ತ್ರಿಬಲ್ ರೈಡಿಂಗ್” ಹೋದರೆ ಏನೆಲ್ಲಾ ತೊಂದರೆ ಆಗಬಹುದು ಎನ್ನುವುದನ್ನ ಇದರಲ್ಲಿ ನೋಡಬಹುದು.  ಈ ಚಿತ್ರದಲ್ಲಿ ಮೂವರು ನಾಯಕಿಯರು. ಅದಿತಿ ಪ್ರಭುದೇವ,  ಮೇಘ ಶೆಟ್ಟಿ ಹಾಗೂ ರಚನಾ ಇಂದರ್. ಎಲ್ಲರ ಅಭಿನಯ ತುಂಬಾ ಚೆನ್ನಾಗಿದೆ. ನೋಡಿ ಹರಸಿ ಎಂದರು ಗೋಲ್ಡನ್ ಸ್ಟಾರ್ ಗಣೇಶ್.

ನನ್ನದು ಈ ಚಿತ್ರದಲ್ಲಿ ಡಾಕ್ಟರ್ ಪಾತ್ರ. ಗಣೇಶ್ ಸರ್ ಜೊತೆ ನನ್ನ ಮೊದಲ ಸಿನಿಮಾ. ಹಾಡು ಹಾಗೂ ಸಿನಿಮಾ ಎರಡು ಚೆನ್ನಾಗಿದೆ ಎಂದು ಮೇಘ ಶೆಟ್ಟಿ ತಿಳಿಸಿದರು.

“ಲವ್ ಮಾಕ್ಟೇಲ್” ನಂತರ ನಾನು‌ ಒಪ್ಪಿಕೊಂಡ ಚಿತ್ರ ಇದು. ಹಠಮಾರಿ ಹೆಣ್ಣಿನ ಪಾತ್ರ ನನ್ನದು. ಏನಾದರೂ ಬೇಕೆಂದರೆ ಅದು ಬೇಕು ಎಂದು ಪಡೆದುಕೊಳ್ಳುತ್ತೇನೆ. ಒಳ್ಳೆಯ ಪಾತ್ರ ಕೊಟ್ಟ ನಿರ್ದೇಶಕರಿಗೆ ಧನ್ಯವಾದ ಎಂದರು ರಚನಾ ಇಂದರ್.

ಗಣೇಶ್ ಸರ್ ಗೆ ಈ ಹಿಂದೆ ಎರಡು ಹಾಡು ಹಾಡಿದೆ. ಇದು ಮೂರನೇ ಹಾಡು. ಸಾಯಿಕಾರ್ತಿಕ್ ತುಂಬಾ ಚೆನ್ನಾಗಿ ಸಂಗೀತ ನೀಡಿದ್ದಾರೆ. ಹಾಡು ಹಾಗೂ ಸಿನಿಮಾ ಎರಡೂ ಹಿಟ್ ಆಗಲಿ ಎಂದು ಚಂದನ್ ಶೆಟ್ಟಿ ಹಾರೈಸಿದರು.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು