ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ʼತ್ರಿಬಲ್ ರೈಡಿಂಗ್ʼ ನಲ್ಲಿ ಟ್ವಿಂಕಲ್ ಟ್ವಿಂಕಲ್ ಲಿಟಲ್ ಸ್ಟಾರ್ ಹಾಡಿಗೆ ಹೆಜ್ಜೆ ಹಾಕಿದ ʼಗೋಲ್ಡನ್ ಸ್ಟಾರ್ʼ

P

Peepal Media Desk • ಸಿನಿಮಾ

• 1 ನಿಮಿಷದ ಓದು

ʼತ್ರಿಬಲ್ ರೈಡಿಂಗ್ʼ ನಲ್ಲಿ ಟ್ವಿಂಕಲ್ ಟ್ವಿಂಕಲ್ ಲಿಟಲ್ ಸ್ಟಾರ್ ಹಾಡಿಗೆ ಹೆಜ್ಜೆ ಹಾಕಿದ ʼಗೋಲ್ಡನ್ ಸ್ಟಾರ್ʼ

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ಅಭಿನಯಿಸಿರುವ “ತ್ರಿಬಲ್ ರೈಡಿಂಗ್” ಚಿತ್ರಕ್ಕಾಗಿ ವಿ. ನಾಗೇಂದ್ರ ಪ್ರಸಾದ್ ಅವರು ಬರೆದಿರುವ “ಟ್ವಿಂಕಲ್ ಟ್ವಿಂಕಲ್ ಲಿಟಲ್‌ ಸ್ಟಾರ್” ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಸಾಯಿಕಾರ್ತಿಕ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ ಪ್ರಕಾಶ್ ಹಾಡಿದ್ದಾರೆ.‌ ಭೂಷಣ್ ನೃತ್ಯ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬಿಡುಗಡೆಯಾದ ಕ್ಷಣದಿಂದಲೇ ಈ ಹಾಡು ಬಾರಿ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ನಮ್ಮ “ತ್ರಿಬಲ್ ರೈಡಿಂಗ್” ಶುರುವಾಗಿದ್ದು, ಕೊರೋನ ಸಮಯದಲ್ಲಿ. ಚಿತ್ರೀಕರಣಕ್ಕೆ ಅನುಮತಿ ಸಿಕ್ಕ ಕೂಡಲೇ ಮೈಸೂರಿನಲ್ಲಿ ಚಿತ್ರೀಕರಣ ಆರಂಭಿಸಿದ್ದೆವು. ಅದು ಆಸ್ಪತ್ರೆಯಲ್ಲಿ. ಎಲ್ಲರಲ್ಲೂ ಭಯದ ವಾತಾವರಣ. ಆ ಸಮಯದಲ್ಲಿ ಚಿತ್ರೀಕರಣ ಮಾಡಲಾಯಿತು. ದೇವರ ದಯೆಯಿಂದ ಯಾವುದೇ ತೊಂದರೆ ಆಗಲಿಲ್ಲ. ಇನ್ನೂ ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಈಗ ಮೂರನೇ ಹಾಡು ಬಿಡುಗಡೆಯಾಗಿದೆ. ಹಿಂದಿನ ಎರಡು ಹಾಡುಗಳು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಜನಪ್ರಿಯವಾಗಿದೆ. ನವೆಂಬರ್ ಹದಿನೈದರಂದು ಟ್ರೇಲರ್ ಬಿಡುಗಡೆಯಾಗಲಿದ್ದು, ಇಪ್ಪತ್ತೈದರಂದು ಚಿತ್ರ ತೆರೆಗೆ ಬರಲಿದೆ. ಇಡೀ ಚಿತ್ರತಂಡದ ಸಹಕಾರದಿಂದ “ತ್ರಿಬಲ್ ರೈಡಿಂಗ್” ಚೆನ್ನಾಗಿ ಬಂದಿದೆ. ಪ್ರೇಕ್ಷಕರಿಗೂ ಪ್ರಿಯವಾಗುವ ವಿಶ್ವಾಸವಿದೆ ಎಂದರು ನಾಯಕ ಗೋಲ್ಡನ್ ಸ್ಟಾರ್ ಗಣೇಶ್.

ಈ ಹಿಂದೆ ಬಿಡುಗಡೆಯಾಗಿರುವ ಎರಡು ಹಾಡುಗಳು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಈ ಹಾಡು ಕೂಡ ಸುಮಧುರವಾಗಿದೆ ಎಂದು ಹಾಡಿನ ಬಗ್ಗೆ ಮಾಹಿತಿ ನೀಡಿದ್ದ ನಿರ್ದೇಶಕ ಮಹೇಶ್ ಗೌಡ, ನವೆಂಬರ್ 25 ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರು ಪ್ರೋತ್ಸಾಹ ನೀಡಿ ಎಂದರು.

ಇದೇ ತಿಂಗಳ 25 ರಂದು ತೆರೆಗೆ ಬರುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ರಾಮ್ ಗೋಪಾಲ್ ವೈ.ಎಂ.

ಇಂದು ಬಿಡುಗಡೆಯಾಗಿರುವ ಈ ಹಾಡು‌ ತುಂಬಾ ‌ಚೆನ್ನಾಗಿದೆ. ಗಣೇಶ್ ಸರ್ ಚೆನ್ನಾಗಿ ನೃತ್ಯ ಮಾಡಿದ್ದಾರೆ. ಎರಡು ಜಡೆ ಒಟ್ಟಿಗೆ ಸೇರುವುದಿಲ್ಲ ಎನ್ನುತ್ತಾರೆ. ಆದರೆ ಈ ಚಿತ್ರದಲ್ಲಿ ನಾವು ಮೂವರು ನಾಯಕಿಯರು. ಇಡೀ ಚಿತ್ರ ಪೂರ್ತಿ ಖುಷಿಯಿಂದ ಕಾಲ ಕಳೆದೆವು. ನಮ್ಮ ಚಿತ್ರಕ್ಕೆ ಬೆಂಬಲ ನೀಡಿ ಎಂದರು ನಾಯಕಿ ಅದಿತಿ ಪ್ರಭುದೇವ.

ಮತ್ತಿಬ್ಬರು ನಾಯಕಿಯರಾದ ರಚನಾ ಇಂದರ್ ಹಾಗೂ ಮೇಘ ಶೆಟ್ಟಿ ಸಹ “ತ್ರಿಬಲ್ ರೈಡಿಂಗ್” ಬಗ್ಗೆ ಮಾತನಾಡಿದರು. ಛಾಯಾಗ್ರಹಕ ಜೈ ಆನಂದ್ ಹಾಗೂ ಸಂಭಾಷಣೆ ಬರೆದಿರುವ ರಾಜಶೇಖರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

P

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version