ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅವಳ ಹೆಜ್ಜೆ ಮಹಿಳಾ ಕನ್ನಡ ಕಿರುಚಿತ್ರೋತ್ಸವದ ಮೊದಲ ಆವೃತ್ತಿಯಲ್ಲೇ ಬಹುಮಾನ ಗೆದ್ದ ಕವಿತಾ ಬಿ ನಾಯಕ್ ಅವರ “ಅನ್ ಹರ್ಡ್ ಎಕೋಸ್”

P

Peepal Media Desk • ಸಿನಿಮಾ

• 2 ನಿಮಿಷದ ಓದು

ಅವಳ ಹೆಜ್ಜೆ ಮಹಿಳಾ ಕನ್ನಡ ಕಿರುಚಿತ್ರೋತ್ಸವದ ಮೊದಲ ಆವೃತ್ತಿಯಲ್ಲೇ ಬಹುಮಾನ ಗೆದ್ದ ಕವಿತಾ ಬಿ ನಾಯಕ್ ಅವರ “ಅನ್ ಹರ್ಡ್ ಎಕೋಸ್”

ಗುಬ್ಬಿವಾಣಿ ಟ್ರಸ್ಟ್ ಆಯೋಜಿಸಿದ್ದ ಅವಳ ಹೆಜ್ಜೆ ಮಹಿಳಾ ಕನ್ನಡ ಕಿರುಚಿತ್ರೋತ್ಸವದಲ್ಲಿ ನಿರ್ದೇಶಕಿ ಕವಿತಾ ಬಿ ನಾಯಕ್ ಅವರ “ಅನ್ ಹರ್ಡ್ ಎಕೋಸ್” ಎಂಬ ಕನ್ನಡ ಕಿರುಚಿತ್ರವು ಪ್ರತಿಷ್ಠಿತ “ಅವಳ ಹೆಜ್ಜೆ” ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಬಹುಮಾನವು ₹1 ಲಕ್ಷ ನಗದು, ಪ್ರಶಸ್ತಿ ಫಲಕ ಮತ್ತು ಪ್ರಶಂಸಾ ಪತ್ರಗಳನ್ನು ಒಳಗೊಂಡಿದೆ.

ಎಂಟು ಆಕರ್ಷಕ ಕಿರುಚಿತ್ರಗಳನ್ನು ಪ್ರದರ್ಶಿಸಿದ ಈ ಉತ್ಸವವು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿತ್ತು. ಎಂಟು ನಿರ್ದೇಶಕಿಯರೊಂದಿಗಿನ ಪ್ರಶ್ನೋತ್ತರದಲ್ಲಿ ಪ್ರೇಕ್ಷಕರು ಉತ್ಸಾಹಭರಿತ, ಚಿಂತನಶೀಲ ಪ್ರಶ್ನೆಗಳನ್ನು ಅವರ ಮುಂದಿಟ್ಟರು.

ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲ್ಲೂಕಿನ ಕವಿತಾ ಬಿ ನಾಯಕ್ ರಂಗಭೂಮಿ ಕಲಾವಿದೆ ಮತ್ತು ನಿರ್ದೇಶಕಿ. ಬದುಕು ಕಮ್ಯೂನಿಟಿ ಕಾಲೇಜಿನಲ್ಲಿ ನಿರ್ದೇಶನ ಮತ್ತು ಚಿತ್ರಕಥೆಗಳಲ್ಲಿ ಡಿಪ್ಲೋಮಾ ಪಡೆದು “ಹದಿನೇಳೆಂಟು” ಸಿನಿಮಾದಲ್ಲಿ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. 

ಸಿನಿಮಾ ಮಾಧ್ಯಮದ ಮೂಲಕ ಮಹಿಳೆಯರ ಸಮಸ್ಯೆಗಳನ್ನು ಪ್ರೇಕ್ಷಕರಿಗೆ ತಲುಪಿಸಬೇಕೆಂಬ ಅವರ ಬದ್ಧತೆ, “ಅನ್‌ಹರ್ಡ್ ಎಕೋಸ್” ನ ಮೂಲಕ ಮುಂದುವರೆಸಿದ್ದಾರೆ. ಈ ಚಿತ್ರವು ಪ್ರೇಕ್ಷಕರ ಆಯ್ಕೆ ಬಹುಮಾನವನ್ನು ಸಹ ಪಡೆದುಕೊಂಡಿದ್ದು, ಅದರ ಬಲವಾದ ಭಾವನಾತ್ಮಕ ಸಂಪರ್ಕಕ್ಕೆ ಸಾಕ್ಷಿಯಾಗಿದೆ.

ಕ್ಷಮಾ ಅಂಬೆಕಲ್ಲು ಅವರ ಕಿರುಚಿತ್ರ “ಪುಷ್ಪ”, ವಿದ್ಯಾರ್ಥಿನಿ ನಿರ್ದೇಶಕಿ ಎಂಬ ವಿಶೇಷ ವರ್ಗದಲ್ಲಿ ನಗದು ಬಹುಮಾನ ಪಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಕ್ಷಮಾ, ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠದಲ್ಲಿ ದೃಶ್ಯ ಸಂವಹನದಲ್ಲಿ ಬಿ.ಎಸ್ಸಿ. ಪದವಿ ಪಡೆಯುತ್ತಿದ್ದಾರೆ.

ಚೊಚ್ಚಲ ನಿರ್ದೇಶನದ ಇತರ ಮೂರು ಕಿರುಚಿತ್ರಗಳು ಸಹ ನಗದು ಬಹುಮಾನಗಳನ್ನು ಪಡೆದಿವೆ: ಮಂದಾರ ಬಟ್ಟಲಹಳ್ಳಿ ನಿರ್ದೇಶನದ “ದಿ ಲಾಸ್ಟ್ ಹ್ಯಾಪಿ ಕಸ್ಟಮರ್” (2024), ಸಿಂಚನಾ ಶೈಲೇಶ್ ನಿರ್ದೇಶನದ “ಕೇಕ್‌ವಾಕ್” (2025) ಮತ್ತು ಸತ್ಯ ಪ್ರಮೋದ ಎಂ.ಎಸ್ ನಿರ್ದೇಶನದ “ಆನ್‌ಲೈನ್” (2025)

ಹಾವೇರಿ ಜಿಲ್ಲೆಯ ರೈತ ಮಹಿಳೆ ರೇಣುಕಾ ಯಲ್ಲಪ್ಪ ಮಲ್ಲಿಗಾರ್ ನಿರ್ಮಿಸಿದ “ನೀರೆಲ್ಲವೂ ತೀರ್ಥ” (2025) ಎಂಬ ಕಿರುಚಿತ್ರವನ್ನು ಸ್ಪರ್ಧಾತ್ಮಕವಲ್ಲದ ವಿಭಾಗದಲ್ಲಿ ಪ್ರದರ್ಶಿಸಲಾಯಿತು.

ಚಿತ್ರೋತ್ಸವದ ಪ್ರಮುಖ ಆಕರ್ಷಣೆ, ಪತ್ರಕರ್ತೆ ಸುನಯನ ಸುರೇಶ್ ನಿರ್ವಹಿಸಿದ ಚರ್ಚಾಗೋಷ್ಠಿ “ಕನ್ನಡ ಸಿನಿಮಾದಲ್ಲಿ ಮಹಿಳಾ ಧ್ವನಿ” ಯಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕಿ ರೂಪಾ ರಾವ್ (ಗಂಟು ಮೂಟೆ), ಟೆಂಟ್ ಸಿನೆಮಾ ಶಾಲೆಯ ಸ್ಥಾಪಕ ನಿರ್ದೇಶಕಿ ಶೋಭಾ ಸಿ.ಎಸ್. ಮತ್ತು ಮುಖ್ಯ ಅತಿಥಿ ಡಿ. ಸುಮನ್ ಕಿತ್ತೂರು ಭಾಗವಹಿಸಿದ್ದರು. 

ತಮ್ಮ ಜಾತಕಗಳು ಹೊಂದಿಕೆಯಾಗಲಿಲ್ಲ ಎಂಬ ಕಾರಣಕ್ಕೆ ತನ್ನ ಚಿತ್ರಕ್ಕೆ ಹಣಕಾಸು ಒದಗಿಸಲು ನಿರಾಕರಿಸಿದ ನಿರ್ಮಾಪಕರ ಬಗ್ಗೆ ಸುಮನ್ ಕಿತ್ತೂರು ಒಂದು ಸ್ವಾರಸ್ಯಕರ ಅನುಭವವನ್ನು ಹಂಚಿಕೊಂಡರು – ಇದು ನಿರ್ದೇಶಕರಿಗೆ ಇರುವ ತರ್ಕಹೀನ ಅಡೆತಡೆಗಳ ಉದಾಹರಣೆಯಾಗಿದೆ.

ರೂಪಾ ರಾವ್ ಅವರು ಚಲನಚಿತ್ರೋದ್ಯಮದಲ್ಲಿ ಎದುರಿಸಿದ ಲಿಂಗ ತಾರತಮ್ಯದ ಬಗ್ಗೆ ಮುಕ್ತವಾಗಿ ಮಾತನಾಡಿ, “ನಿರ್ಮಾಪಕರು ಮತ್ತು ವಿತರಕರು ನನ್ನನ್ನು ನೇರವಾಗಿ ಉದ್ದೇಶಿಸಿ ಮಾತನಾಡುವ ಬದಲು ನನ್ನ ಪುರುಷ ಸಹಾಯಕರೊಂದಿಗೆ ಮಾತನಾಡುತ್ತಿದ್ದರು. ಹಲವು ನಿರಾಕರಣೆಗಳು ಮತ್ತು ಆರ್ಥಿಕ ಸಂಕಷ್ಟಗಳ ನಡುವೆಯೂ ‘ಹುಚ್ಚು ಮತ್ತು ಉತ್ಸಾಹ’ ಇದ್ದರೆ ಮಾತ್ರ ಚಲನಚಿತ್ರ ನಿರ್ದೇಶಕರು ಮುಂದುವರೆಯಲು ಸಾಧ್ಯ” ಎಂದರು.

“ಇದು ಕೇವಲ ಕಿರುಚಿತ್ರ ಪ್ರದರ್ಶನವಲ್ಲ -  ಮಹಿಳೆಯರ ಅನುಭವ, ದೃಷ್ಟಿಕೋನಗಳಿಗೆ ವೇದಿಕೆ ನೀಡುವ, ಲಿಂಗ ಸಮಾನತೆಯ ಚಿಂತನೆಗೆ ಉತ್ತೇಜನ ನೀಡುವ ಒಂದು ಚಳುವಳಿ” - ಮಾಲವಿಕ ಗುಬ್ಬಿವಾಣಿ - ಸ್ಥಾಪಕ ಟ್ರಸ್ಟಿ

“ಈ ಉತ್ಸವದ ಮೊದಲ ಆವೃತ್ತಿಯ ಯಶಸ್ಸಿನಿಂದ ನಮಗೆ ತುಂಬಾ ಪ್ರೋತ್ಸಾಹ ಸಿಕ್ಕಿದೆ. ಮುಂದಿನ ವರ್ಷದಲ್ಲಿ ಕರ್ನಾಟಕದಾದ್ಯಂತ ಮಹಿಳೆಯರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದಕ್ಕಾಗಿ ಎದುರು ನೋಡುತ್ತೇವೆ.” - ಶಾಂತಲಾ ದಾಮ್ಲೆ -  ಚಿತ್ರೋತ್ಸವ ನಿರ್ದೇಶಕಿ
P

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version