ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಂತಹ ಅದ್ಭುತ ಸಿನಿಮಾಗಳು ಮತ್ತೆ ಮತ್ತೆ ಬರುವುದಿಲ್ಲ, ಸಣ್ಣಪುಟ್ಟ ಲೋಪಗಳನ್ನೇ ದೊಡ್ಡದು ಮಾಡಬೇಡಿ: ರಾಮಾಯಣ ಪ್ರೀ-ರಿಲೀಸ್‌ನಲ್ಲಿ ನಟ ಯಶ್ ಮನವಿ

P

Peepal Media • ಸಿನಿಮಾ

• 1 ನಿಮಿಷದ ಓದು

ಇಂತಹ ಅದ್ಭುತ ಸಿನಿಮಾಗಳು ಮತ್ತೆ ಮತ್ತೆ ಬರುವುದಿಲ್ಲ, ಸಣ್ಣಪುಟ್ಟ ಲೋಪಗಳನ್ನೇ ದೊಡ್ಡದು ಮಾಡಬೇಡಿ: ರಾಮಾಯಣ ಪ್ರೀ-ರಿಲೀಸ್‌ನಲ್ಲಿ ನಟ ಯಶ್ ಮನವಿ

ದಂಗಲ್ ಖ್ಯಾತಿಯ ನಿತೀಶ್ ತಿವಾರಿ ನಿರ್ದೇಶನದಲ್ಲಿ ಅತ್ಯಂತ ಭಾರಿ ಬಜೆಟ್ ಹಾಗೂ ಅತ್ಯುನ್ನತ ತಾಂತ್ರಿಕ ಮೌಲ್ಯಗಳೊಂದಿಗೆ ಸಿದ್ಧವಾಗಿರುವ ಪೌರಾಣಿಕ ಮಹಾಕಾವ್ಯ ‘ರಾಮಾಯಣ’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ. ಬಾಲಿವುಡ್ ತಾರೆ ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ‘ರಾಕಿಂಗ್ ಸ್ಟಾರ್’ ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ದೃಶ್ಯವೈಭವವು ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 5ರಂದು ಜಗತ್ತಿನಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

ನಮಿತ್ ಮಲ್ಹೋತ್ರಾ ಅವರೊಂದಿಗೆ ಯಶ್ ಕೂಡ ಸ್ವತಃ ಈ ಚಿತ್ರದ ಸಹ-ನಿರ್ಮಾಪಕರಾಗಿದ್ದು, ತೆಲುಗಿನಲ್ಲಿ ಖ್ಯಾತ ನಿರ್ಮಾಪಕ ದಿಲ್ ರಾಜು ತಮ್ಮ ‘ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್’ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ವಿತರಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಯಶ್, ತಮ್ಮ ಇತ್ತೀಚಿನ ‘ಟಾಕ್ಸಿಕ್’ ಚಿತ್ರ ಪ್ರೇಕ್ಷಕರನ್ನು ನಿರೀಕ್ಷಿತ ಮಟ್ಟದಲ್ಲಿ ತಲುಪಲು ಸಾಧ್ಯವಾಗದಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡರು. “ಎರಡು ತಿಂಗಳ ಹಿಂದಷ್ಟೇ ನಿಮ್ಮ ಮುಂದೆ ಬಂದಿದ್ದೆ, ಮತ್ತೆ ಇಷ್ಟು ಬೇಗ ಭೇಟಿಯಾಗುತ್ತಿದ್ದೇನೆ. ಆ ಸಿನಿಮಾ ಕೆಲವರಿಗೆ ಇಷ್ಟವಾಯಿತು, ಕೆಲವರಿಗೆ ಇಷ್ಟವಾಗಲಿಲ್ಲ. ಇಷ್ಟವಾದರೂ, ಆಗದಿದ್ದರೂ ನನ್ನ ಮೇಲಿನ ಪ್ರೀತಿಯಿಂದ ಚಿತ್ರಮಂದಿರಕ್ಕೆ ಬಂದ ಪ್ರತಿಯೊಬ್ಬರಿಗೂ ಧನ್ಯವಾದಗಳು, ನಿಮ್ಮ ಈ ಪ್ರೀತಿಯೇ ನಮ್ಮನ್ನು ಸದಾ ಮುನ್ನಡೆಸುತ್ತದೆ” ಎಂದರು.

ಅಲ್ಲದೆ, ರಾಜಮೌಳಿ, ಪ್ರಭಾಸ್, ರಾಮ್ ಚರಣ್, ಜೂನಿಯರ್ ಎನ್‌ಟಿಆರ್ ಅವರ ಹೆಸರನ್ನು ಉಲ್ಲೇಖಿಸುತ್ತಾ ತೆಲುಗು ಚಿತ್ರರಂಗ ಜಾಗತಿಕ ಮಟ್ಟದಲ್ಲಿ ತೋರುತ್ತಿರುವ ಪಾರಮ್ಯವನ್ನು ಕೊಂಡಾಡಿದ ಯಶ್, ದಕ್ಷಿಣ ಭಾರತ ಮತ್ತು ಬಾಲಿವುಡ್ ಚಿತ್ರರಂಗಗಳ ನಡುವೆ ಪರಸ್ಪರ ಪ್ರೀತಿ-ಗೌರವಗಳ ವಿನಿಮಯ ಅತ್ಯಗತ್ಯ ಎಂದು ಪ್ರತಿಪಾದಿಸಿದರು.

ಚಿತ್ರದಲ್ಲಿನ ಪಾತ್ರವರ್ಗದ ಬಗ್ಗೆ ಮಾತನಾಡುತ್ತಾ, ರಾವಣನ ಪಾತ್ರಕ್ಕೆ ಜೀವ ತುಂಬುವುದರೊಂದಿಗೆ ಚಿತ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಲು ನಮಿತ್ ಮಲ್ಹೋತ್ರಾ ಅವರ ಜಾಗತಿಕ ಕನಸು ಮತ್ತು ಬದ್ಧತೆಯೇ ಪ್ರೇರಣೆ ಎಂದು ಯಶ್ ತಿಳಿಸಿದರು. ಸೀತೆಯಾಗಿ ಸಾಯಿ ಪಲ್ಲವಿ ಅಭಿನಯ ಅದ್ಭುತವಾಗಿದೆ ಹಾಗೂ ಶೂರ್ಪನಖಿಯ ಸವಾಲಿನ ಪಾತ್ರವನ್ನು ರಕುಲ್ ಪ್ರೀತ್ ಸಿಂಗ್ ಸಮರ್ಥವಾಗಿ ನಿರ್ವಹಿಸಿದ್ದಾರೆ ಎಂದರು.

ಇನ್ನು ರಾಮನ ಪಾತ್ರಧಾರಿ ರಣಬೀರ್ ಕಪೂರ್ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅವರು, “ಅವರು ಯಾವುದೇ ಅಹಂಕಾರವಿಲ್ಲದ ಅತ್ಯಂತ ಸರಳ ಹಾಗೂ ಅದ್ಭುತ ನಟ. ರಾಮನ ಪಾತ್ರದಲ್ಲಿ ರಣಬೀರ್ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ವಿಶೇಷ ಮನವಿ ಮಾಡಿದ ಯಶ್, “ಇಂತಹ ಮಹತ್ವಾಕಾಂಕ್ಷೆಯ ಮತ್ತು ಅದ್ಭುತ ಸಿನಿಮಾಗಳು ಮತ್ತೆ ಮತ್ತೆ ಬರುವುದಿಲ್ಲ. ಆದ್ದರಿಂದ ದಯವಿಟ್ಟು ವಿಎಫ್‌ಎಕ್ಸ್ (VFX) ಸೇರಿದಂತೆ ಸಣ್ಣಪುಟ್ಟ ತಾಂತ್ರಿಕ ಲೋಪಗಳನ್ನು ಭೂತಗನ್ನಡಿ ಹಿಡಿದು ಹುಡುಕಬೇಡಿ. ನಮಿತ್ ಅವರಂತಹ ಪ್ಯಾಶನೇಟ್ ನಿರ್ಮಾಪಕರನ್ನು ನಾವು ನಿರುತ್ಸಾಹಗೊಳಿಸಿದರೆ ಭಾರತೀಯ ಚಿತ್ರರಂಗ ಹಲವು ವರ್ಷಗಳಷ್ಟು ಹಿಂದಕ್ಕೆ ಹೋಗುತ್ತದೆ. ಮುಕ್ತ ಮನಸ್ಸಿನಿಂದ ಚಿತ್ರವನ್ನು ನೋಡಿ ಆನಂದಿಸಿ. ರಚನಾತ್ಮಕ ವಿಮರ್ಶೆಗಳನ್ನು ಸ್ವೀಕರಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಗುಣಮಟ್ಟದ ಸಿನಿಮಾಗಳನ್ನು ನೀಡಲು ನಾವು ಸದಾ ಸಿದ್ಧರಿದ್ದೇವೆ. ಭಾರತೀಯ ಸಿನಿರಂಗ ಒಟ್ಟಾಗಿ ಜಾಗತಿಕ ಮಟ್ಟದಲ್ಲಿ ಬೆಳೆಯಬೇಕು” ಎಂದು ಕರೆ ನೀಡಿದರು.

P

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version