ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಪ್ರಚಾರ ಅಖಾಡದಲ್ಲಿ ‘ಎಕ್ಕ’, ಜುಲೈ  18ಕ್ಕೆ ಯುವರಾಜ್ ಕುಮಾರ್ ಸಿನಿಮಾ ರಿಲೀಸ್

PPeepal Media Desk

Peepal Media Desk ಸಿನಿಮಾ

• 2 ನಿಮಿಷದ ಓದು

ಪ್ರಚಾರ ಅಖಾಡದಲ್ಲಿ ‘ಎಕ್ಕ’, ಜುಲೈ  18ಕ್ಕೆ ಯುವರಾಜ್ ಕುಮಾರ್ ಸಿನಿಮಾ ರಿಲೀಸ್

ಯುವ ರಾಜ್ಕುಮಾರ್‌ ಕನ್ನಡ ಚಿತ್ರರಂಗದ ಭರವಸೆಯ ನಟನಾಗಿ ಗುರುತಿಸಿಕೊಂಡಿದ್ದು, ಸದ್ಯ ತಮ್ಮ ಎರಡನೇ ಸಿನಿಮಾ ಬಿಡುಗಡೆಯಲ್ಲಿ ಬ್ಯುಸಿಯಾಗಿದ್ದಾರೆ. ಯುವ ನಟನೆಯ ‘ಎಕ್ಕ’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭ ಆಗಿದೆ. ಟೀಸರ್ , ಹಾಡುಗಳು ಬಿಡುಗಡೆಯಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ‘ಎಕ್ಕ’ ಸಿನಿಮಾದ ಸುದ್ದಿಗೋಷ್ಠಿ  ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯುವರಾಜ್ ಕುಮಾರ್ ಹಾಗೂ ಇಡೀ ತಂಡ ಹಾಜರಿದ್ದರು.

ಈ ವೇಳೆ ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, ಒಂದು ಸಿನಿಮಾ ಮಾಡಬೇಕಿದ್ದರೆ ಒಂದೊಳ್ಳೆ ವೈಬ್ ಇದ್ದರೆ ಅದು ಚೆನ್ನಾಗಿ ಹೋಗುತ್ತದೆ ಎಂಬ ನಂಬಿಕೆ ಇದೆ. ನಾವು ಬಿಟ್ಟಿರುವ ಪ್ರತಿ ಕಂಟೆಂಟ್ ಎಷ್ಟು ಎಂಜಾಯ್ ಮಾಡಿದ್ದೇವೆ ಎಂಬುದನ್ನು ನೀವು ನೋಡಿದ್ದೀರಾ. ನೋಡುವಾಗ ನಿಮಗೂ ಕೂಡ ಅದೇ ಎಮೋಷನ್ ಪಾಸ್ ಆಗುತ್ತದೆ ಎಂದುಕೊಂಡಿದ್ದೇನೆ. ಈ ಜರ್ನಿಯಲ್ಲಿ ಏನೂ ಕಲಿದ್ದೇನೆ ಎಂದರೆ, ಒಂಬತ್ತು ತಿಂಗಳಲ್ಲಿ ಮಗು ಹೆತ್ತಾಗೆ ಸಿನಿಮಾ ಮಾಡಬಹುದು ಎಂದರು.

ನಾಯಕ ಯುವ ಮಾತನಾಡಿ, ಎಕ್ಕ ಸಿನಿಮಾದಿಂದ ನಾವು ಬಿಟ್ಟಿರುವ ಎಲ್ಲಾ ಕಂಟೆಂಟ್ ಎಲ್ಲರಿಗೂ ಮುಟ್ಟುತ್ತಿದೆ. ಬ್ಯಾಂಗಲ್ ಬಂಗಾರಿ ಹಾಡಿಗೆ ಎಲ್ಲಾ ವರ್ಗದ ಜನ ಇಷ್ಟಪಟ್ಟು ಡ್ಯಾನ್ಸ್ ಮಾಡಿರುವುದನ್ನು ನೋಡಲು ಖುಷಿಯಾಗುತ್ತದೆ. ಥಿಯೇಟರ್ ನಲ್ಲಿ ಈ ಸಿನಿಮಾವನ್ನು ಎಲ್ಲರೂ ಎಂಜಾಯ್ ಮಾಡುತ್ತೀರ. ಖುಷಿಯಿಂದ ಸಿನಿಮಾವನ್ನು ಮಾಡಿದ್ದೇವೆ. ನನ್ನನ್ನು ನೀವು ಹೊಸ ರೀತಿಯಲ್ಲಿ ನೋಡಬಹುದು. ಜುಲೈ 18ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ನಿಮ್ಮ ಬೆಂಬಲ ಇರಲಿ ಎಂದು ಹೇಳಿದರು.

ನಿರ್ಮಾಪಕ ಕಾರ್ತಿಕ್ ಗೌಡ ಮಾತನಾಡಿ, ಜೂನ್ 6ಕ್ಕೆ ಸಿನಿಮಾ ರಿಲೀಸ್ ಪ್ಲ್ಯಾನ್ ಮಾಡಿದ್ದೇವು. ಆದರೆ ಸಿನಿಮಾ ಕೆಲಸ ಬಾಕಿ ಇರುವುದರಿಂದ ಒಂದು ತಿಂಗಳು ಅಂದರೆ ಜುಲೈ 18ಕ್ಕೆ ರಿಲೀಸ್ ಮಾಡುತ್ತಿದ್ದೇವೆ. ಪಿಕ್ಚರ್ಸ್ ಚೆನ್ನಾಗಿದ್ದರೆ ಜನ ಥಿಯೇಟರ್ ಗೆ ಬರುತ್ತಾರೆ. ಸೆಕೆಂಡ್ ಆಫ್‌ನಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೆಡಿ, ಡೆವಿಲ್, 45 ಇದೆ. ತುಂಬಾ ಸಿನಿಮಾಗಳಿವೆ. ಅತುಲ್ , ಆದಿತ್ಯಾ, ಜಾಲಿ ಜಾಕ್,ಸಾಧುಕೋಕಿಲಾ, ಪುನೀತ್ ರುದ್ರನಾಗ್, ಡಾಕ್ಟರ್ ಸೂರಿ, ಹರಿಣಿ, ಶೃತಿ ಮೇಡಂ, ರಾಹುಲ್ ದೇವಶೆಟ್ಟಿ ಮುಂತಾದ ತಾರಾಬಳಗ ಚಿತ್ರದಲ್ಲಿ ಇದೆ ಎಂದು ಮಾಹಿತಿ ನೀಡಿದರು.

ಸಂಗೀತ ನಿರ್ದೇಶಕ ಚರಣ್ ರಾಜ್ ಮಾತನಾಡಿ, ಸಿನಿಮಾ ಹಾಡುಗಳು ಅಂತಾ ಬಂದಾಗ ಎಲ್ಲರ ಐಡಿಯಾಗಳ  ಸಹಕಾರ ಇದೆ. ಈ ಸಿನಿಮಾ ಮಾಡುತ್ತಿರುವುದು ತುಂಬಾ ಎಂಜಾಯ್ ಮಾಡುತ್ತಿದ್ದೇನೆ. ಇನ್ನೂ ಸಿನಿಮಾದಲ್ಲಿ ಹಾಡುಗಳಿವೆ. ಚಿತ್ರ ಕೂಡ ಚೆನ್ನಾಗಿ ಬಂದಿದೆ‌. ಸದ್ಯ ಹಿನ್ನೆಲೆ‌ ಸಂಗೀತ ಕೆಲಸ ನಡೆಯುತ್ತಿದೆ. ಎಲ್ಲಾ ಕಂಟೆಂಟ್ ಗೆ ಮೆಚ್ಚುಗೆ ಸಿಗುತ್ತಿರುವುದು ಖುಷಿ ಎಂದು ಹೇಳಿದರು.

ಎಕ್ಕ ಚಿತ್ರದಲ್ಲಿ ನಾಯಕ ಯುವ ರಾಜ್ಕುಮಾರ್‌ಗೆ ಸಂಜನಾ ಆನಂದ್ ಹಾಗೂ ಸಂಪದಾ ನಾಯಕಿಯರಾಗಿ ಸಾಥ್‌ ಕೊಟ್ಟಿದ್ದಾರೆ. ಉಳಿದಂತೆ ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣವಿದೆ.

ರೋಹಿತ್ ಪದಕಿ ನಿರ್ದೇಶನದ ಪಕ್ಕಾ ಕಮರ್ಷಿಯಲ್ ಎಂಟರ್‌ಟೈನರ್ ಸಿನಿಮಾ ‘ಎಕ್ಕ’.

ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣವಾಗುತ್ತಿದೆ. ಪಿಆರ್‌ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲ್ಮ್ಸ್ ಹಾಗೂ ಕೆಆರ್‌ಜಿ ಸ್ಟುಡಿಯೋಸ್ ಸಂಸ್ಥೆಗಳು ಒಟ್ಟಾಗಿ ಚಿತ್ರ ನಿರ್ಮಾಣ ಮಾಡಲಾಗಿದೆ. ಎಕ್ಕ’ ಚಿತ್ರದ ವಿಚಾರಕ್ಕೆ ಬಂದರೆ ಇದು ಪಕ್ಕಾ ರಾ ಕಮರ್ಷಿಯಲ್ ಸಿನಿಮಾ. ಮಾಸ್ ಪ್ರೇಕ್ಷರಕನ್ನು ಗಮನದಲ್ಲಿಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದಾರೆ. ಚರಣ್ ರಾಜ್ ಸಂಗೀತ, ಸತ್ಯಾ ಹೆಗಡೆ ಛಾಯಾಗ್ರಹಣ ಚಿತ್ರಕ್ಕಿದೆ. ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಎಕ್ಕ ಸಿನಿಮಾ ಜುಲೈ 18ಕ್ಕೆ ಗ್ರ್ಯಾಂಡ್ ರಿಲೀಸ್‌ ಆಗಲಿದೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು