Monday, January 12, 2026

ಸತ್ಯ | ನ್ಯಾಯ |ಧರ್ಮ

ಕಟ್ಟಡ ಕುಸಿತ, ಇಬ್ಬರ ದುರ್ಮರಣ : ತುರ್ತು ಚಿಕಿತ್ಸೆಗೆ ಸಂಸದ ಡಿ.ಕೆ.ಸುರೇಶ್ ಸೂಚನೆ

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಆನೇಕಲ್ ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ 20 ಜನರಿಗೆ ಗಂಭೀರವಾದ ಗಾಯಗಳಾಗಿವೆ.

ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ ದುರ್ಘಟನೆ ಸಂಭವಿಸಿದೆ.ಕಟ್ಟಡದ ಅವಶೇಷಗಳ ಅಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ಇನ್ನೂ ಗಾಯಾಳುಗಳಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾರಿಸಿದ್ದು ಕಟ್ಟಡ ತೆರವಿಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ನಡೆದ ದುರ್ಘಟನೆ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದರಾದ ಡಿ.ಕೆ.ಸುರೇಶ್ ಟ್ವಿಟ್ ಮಾಡಿದ್ದು, ಸ್ಥಳೀಯ ಆಡಳಿತಕ್ಕೆ ತುರ್ತು ಚಿಕಿತ್ಸೆ ನೀಡಲು ಸೂಚಿಸಿದ್ದೇನೆ ಎಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page