Monday, June 17, 2024

ಸತ್ಯ | ನ್ಯಾಯ |ಧರ್ಮ

ಹೈಕೋರ್ಟ್ ವಿಚಾರಣೆಗೆ ಹಾಜರಾದ ಸಂಸದ ಪ್ರಜ್ವಲ್ ರೇವಣ್ಣ

ಆದಾಯದ ಬಗ್ಗೆ ತಪ್ಪು ಮಾಹಿತಿ ನೀಡಿ ಚುನಾವಣಾ ಆಯೋಗಕ್ಕೆ ವಂಚಿಸಿದ ಆರೋಪದ ಅಡಿಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ಹೈಕೋರ್ಟ್ ಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಅವರ ಎದುರು ನಿಂತು ಪರಾಜಯರಾದ ಎ.ಮಂಜು ಸಲ್ಲಿಸಿದ ತಕರಾರು ಅರ್ಜಿ ಅಡಿಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಹಾಜರಾಗಲೇಬೇಕು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಒತ್ತಾಯಿಸಿತ್ತು. ಈ ವೇಳೆ ಹೈಕೋರ್ಟ್ ವಿಚಾರಣೆ ಎದುರಿಸಿದ ಪ್ರಜ್ವಲ್ ರೇವಣ್ಣ ಅವರು ಅರ್ಜಿದಾರರ ಪರ ವಕೀಲರ ಪ್ರಶ್ನೆಗಳನ್ನು ಎದುರಿಸಿದರು.

ಅವರ ಹೇಳಿಕೆಗಳನ್ನು ದಾಖಲಿಸಿದ ಹೈಕೋರ್ಟ್ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 15 ಕ್ಕೆ ಮುಂದೂಡಿದೆ.

ಚುನಾವಣೆ ಸಂದರ್ಭದಲ್ಲಿ ಆದಾಯ ತೆರಿಗೆ ವಿವರಗಳ ಬಗ್ಗೆ ಸುಳ್ಳು ಮಾಹಿತಿ ಮತ್ತು ತಪ್ಪಾದ ಅಂಕಿ ಅಂಶಗಳನ್ನು ನೀಡಿದ್ದಾರೆ ಎಂದು ಅರ್ಜಿದಾರ ಎ.ಮಂಜು ದೂರು ದಾಖಲಿಸಿದ್ದರು. ಚುನಾವಣೆ ನಡೆದು ಮೂರು ವರ್ಷಗಳ ವರೆಗೂ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದೇ ವಕೀಲರ ಕಡೆಯಿಂದಲೇ ಕೋರ್ಟ್ ಪ್ರಕ್ರಿಯೆ ಮುಂದುವರೆಸಿದ್ದರು.

ಹಣಬಲದ ಮೂಲಕ ವಕೀಲರ ನೇಮಿಸಿ, ವಿಚಾರಣೆಗೆ ಹಾಜರಾಗದೇ ಇದ್ದರೆ ಕೋರ್ಟ್ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪ್ರತಿವಾದಿ ವಕೀಲರಿಗೆ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿಚಾರಣೆ ಎದುರಿಸಿದ್ದಾರೆ. ಪ್ರತಿವಾದಿ ಪ್ರಜ್ವಲ್ ರೇವಣ್ಣ ಹೇಗೆ ಅಕ್ರಮ ಎಸಗಿದ್ದಾರೆ, ಅಕ್ರಮವಾಗಿ ಹೇಗೆ ಆಸ್ತಿ ಸಂಪಾದಿಸಿದ್ದಾರೆ, ಸರ್ಕಾರಿ ಜಮೀನು ಖರೀದಿಸಿದ್ದಾರೆ, ಆದಾಯ ತೆರಿಗೆ ವಂಚಿಸಿದ್ದಾರೆ, ಬೇನಾಮಿ ಆಸ್ತಿ ಗಳಿಸಿದ್ದಾರೆ ಎಂಬ ಬಗ್ಗೆ ಎಂಬ ಅಂಶಗಳ ಕುರಿತು ಪ್ರಶ್ನೆಗಳ ಮೂಲಕ ನ್ಯಾಯಪೀಠ ಹೇಳಿಕೆ ದಾಖಲು ಮಾಡಿಸಿದರು.

‘ಒಂದು ವೇಳೆ ಈ ಪ್ರಕರಣದಲ್ಲಿ ನ್ಯಾಯಪೀಠ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅನೂರ್ಜಿತಗೊಳಿಸಿದರೆ, ಅವರ ನಂಬಿಕೆ ಹೆಚ್ಚು ಮತ ಪಡೆದ ಎರಡನೇ ಅಭ್ಯರ್ಥಿಯಾದ ನನ್ನನ್ನೇ ಆಯ್ಕೆಯಾದ ಅಭ್ಯರ್ಥಿ ಎಂದು ಘೋಷಿಸಬೇಕು ಎಂಬ ಎ.ಮಂಜು ಅವರ ಕೋರಿಕೆ ಸಮಂಜಸವಲ್ಲ’ ಎಂದು ಪ್ರಜ್ವಲ್ ಪ್ರತ್ಯಾರೋಪ ಅರ್ಜಿಯಲ್ಲಿ ತಿಳಿಸಿದ್ದಾರೆ. ಜೊತೆಗೆ ಅರ್ಜಿದಾರ ಎ.ಮಂಜು ಕೂಡಾ ಚುನಾವಣಾ ಅಕ್ರಮ ನಡೆಸಿದ್ದಾರೆ, ಅವರ ಮೇಲಿರುವ ಕ್ರಿಮಿನಲ್ ಪ್ರಕರಣವನ್ನು ಮುಚ್ಚಿಟ್ಟ ಬಗ್ಗೆಯೂ ವಿಚಾರಣೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಸ್ತಾಪಿಸಿ, ಅವರ ಮನವಿಯನ್ನು ಪುರಸ್ಕರಿಸಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಅರ್ಜಿದಾರ ಎ.ಮಂಜು ರವರು IT ಮತ್ತು ED ಇಲಾಖೆಗೂ ದೂರು ಸಲ್ಲಿಸಿ ತನಿಖೆಗೆ ಆಗ್ರಹಿಸಿದ್ದರು. ಅಂದಿನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಕೂಡಾ ಇದು ಆದಾಯ ತೆರಿಗೆ ಇಲಾಖೆ ತನಿಖೆಗೆ ಸೂಕ್ತವಾದ ಪ್ರಕರಣ ಎಂದು ವರದಿ ನೀಡಿದ್ದರು. ನಂತರ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪು ಪ್ರಜ್ವಲ್ ಪರ ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು