Saturday, May 10, 2025

ಸತ್ಯ | ನ್ಯಾಯ |ಧರ್ಮ

ಮುಡಾ ಪ್ರಕರಣ: ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಕೇವಿಯೆಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್ ಅವರು‌ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ, ಹೈಕೋರ್ಟ್ ನಲ್ಲಿ ಕೇವಿಯೆಟ್ ಅರ್ಜಿಯೊಂದು ಸಲ್ಲಿಕೆಯಾಗಿದೆ.

ನಾಗರಭಾವಿ ನಿವಾಸಿಯಾದ ಹೈಕೋರ್ಟ್ ವಕೀಲ ಎಸ್.ಪಿ.ಪ್ರದೀಪ್ ಕುಮಾರ್ ಶನಿವಾರ ಈ ಕೇವಿಯಟ್ ಅರ್ಜಿ ದಾಖಲಿಸಿದ್ದಾರೆ. ಈ ಕೇವಿಯೇಟ್‌ ಪ್ರಕಾರ ಒಂದು ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇನಾದರೂ, ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದರೆ ಆಗ, ನಮ್ಮ ವಾದ ಆಲಿಸದೆ ಯಾವುದೇ ಆದೇಶ ಹೊರಡಿಸಬಾರದು” ಎಂದು ಕೋರಲಾಗಿದೆ. ಹೈಕೋರ್ಟ್ ವಕೀಲ ಎಂ.ಎಚ್.ಪ್ರಕಾಶ್ ವಕಾಲತ್ತು ವಹಿಸಿದ್ದಾರೆ.

“ಮುಡಾ ಹಗರಣವನ್ನು ತನಿಖೆಗೆ ಒಳಪಡಿಸಲು ಆದೇಶಿಸಬೇಕು” ಎಂದು ಕೋರಿ ಎಸ್.ಪಿ.ಪ್ರದೀಪ್ ಕುಮಾರ್ ಈಗಾಗಲೇ “ಜನಪ್ರತಿನಿಧಿಗಳ ವಿಶೇಷ ಕೋರ್ಟ್” ನಲ್ಲಿ ಖಾಸಗಿ ದೂರೊಂದನ್ನು ದಾಖಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page