Monday, October 28, 2024

ಸತ್ಯ | ನ್ಯಾಯ |ಧರ್ಮ

ಮುಡಾ ಪ್ರಕರಣ : ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 9 ಕಡೆಗಳಲ್ಲಿ ಇಡಿ ದಾಳಿ

ಮುಡಾ ಪ್ರಕರಣ ದಿನದಿಂದ ದಿನಕ್ಕೆ ಮತ್ತಷ್ಟು ತಿರುವು ಪಡೆದುಕೊಳ್ಳುತ್ತಿದ್ದು ಇಂದು ಬೆಳಿಗ್ಗೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯದ 9 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ಮೂಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ 9 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಶನಿವಾರ ಇಡಿ ಅಧಿಕಾರಿಗಳು ಮುಡಾ ಅಧಿಕಾರಿಗಳ ಹೇಳಿಕೆಗಳನ್ನು ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ದಾಳಿ ನಡೆಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page