ಮುಡಾ ಪ್ರಕರಣ ದಿನದಿಂದ ದಿನಕ್ಕೆ ಮತ್ತಷ್ಟು ತಿರುವು ಪಡೆದುಕೊಳ್ಳುತ್ತಿದ್ದು ಇಂದು ಬೆಳಿಗ್ಗೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯದ 9 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಮೂಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ 9 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಶನಿವಾರ ಇಡಿ ಅಧಿಕಾರಿಗಳು ಮುಡಾ ಅಧಿಕಾರಿಗಳ ಹೇಳಿಕೆಗಳನ್ನು ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ದಾಳಿ ನಡೆಸಲಾಗಿದೆ.