ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಈಗಾಗಲೇ ಅಂತ್ಯಗೊಂಡಿದೆ. ಇದರ ತೀರ್ಪನ್ನು ಕಾಯ್ದಿರಿಸಿದ್ದ ರಾಜ್ಯ ಹೈಕೋರ್ಟ್ ಇಂದು (ಸೆಪ್ಟಂಬರ್ 24) ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ.
ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ಪ್ರಶ್ನಿಸಿ ಹಾಗೂ ಅದನ್ನು ರದ್ದುಗೊಳಿಸುವಂತೆ ಕೋರಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ರಾಜಕೀಯ ವಾಗ್ವಾದ, ಪ್ರತಿಭಟನೆ, ಹಲವು ರೀತಿಯ ಲೆಕ್ಕಾಚಾರಕ್ಕೆ ಕಾರಣವಾಗಿದ್ದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ತೀರ್ಪು ಪ್ರಕಟವಾಗಲಿದೆ. ಮುಖ್ಯಮಂತ್ರಿಗಳ ಅರ್ಜಿ ಕುರಿತಾಗಿ ಘಟಾನುಘಟಿ ವಕೀಲರು ಸುದೀರ್ಘ ವಾದ -ಪ್ರತಿವಾದ ಮಂಡಿಸಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ತೀರ್ಪನ್ನು ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದ್ದಾರೆ.