ಮುಡಾ ಪ್ರಕರಣ: ಲೋಕಾಯುಕ್ತ ಅಧಿಕಾರಿಗಳಿಂದ ಸಿಎಂ ವಿಚಾರಣೆ ಅಂತ್ಯ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಅಂತ್ಯವಾಗಿದೆ. ಹಾಗೆಯೇ ಕೆಲವೇ ಗಂಟೆಗಳಲ್ಲಿ ವಿಚಾರಣೆ ಮುಗಿಸಿದ ಲೋಕಾಯುಕ್ತ ಅಧಿಕಾರಿಗಳು ಸಿದ್ದರಾಮಯ್ಯ ಕಡೆಯಿಂದ ಹಲವು ಪ್ರಶ್ನೆಗಳಿಗೆ ಉತ್ತರ ಪಡೆದುಕೊಂಡಿದ್ದಾರೆ.

ಇದೀಗ ಅಂತ್ಯವಾಗಿದ್ದು, ವಿಚಾರಣೆ ಮುಗಿಸಿ ಸಿಎಂ ವಿಚಾರಣೆ ಸಿದ್ದರಾಮಯ್ಯ ಅತಿಥಿಗೃಹಕ್ಕೆ ತೆರಳಿದ್ದಾರೆ. ಸಿಎಂ ಜೊತೆ ಕಾನೂನು ಸಲಹೆಗಾರ ಪೊನ್ನಣ್ಣ ಸಹ ತೆರಳಿದ್ದಾರೆ.

ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಎಸ್ಪಿ ಯುದೇಶ್ ನೇತೃತ್ವದಲ್ಲಿ ನಾಲ್ವರು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯರನ್ನ ವಿಚಾರಣೆಗೆ ನಿಲ್ಲಿಸಿದ್ದಾರೆ. ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಅಂದರೆ 2 ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ವಿಚಾರಣೆ ಎದುರಿಸಿದರು.

Related Articles

ಇತ್ತೀಚಿನ ಸುದ್ದಿಗಳು