Home ರಾಜ್ಯ ದಕ್ಷಿಣ ಕನ್ನಡ ಮುಡಾ ಆಯುಕ್ತರ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮುಡಾ ಆಯುಕ್ತರ ವಿರುದ್ಧ ಲೈಂಗಿಕ ಕಿರುಕುಳ ಆರೋಪ

0

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹೊರಗುತ್ತಿಗೆ ನೌಕರರೊಬ್ಬರು ಅದರ ಆಯುಕ್ತ ಮನ್ಸೂರ್ ಅಲಿ ತನಗೆ ಲೈಂಗಿಕ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ IANS ವರದಿ ಮಾಡಿದೆ.

ಬೆರಳಚ್ಚುಗಾರ್ತಿಯಾಗಿ ಕೆಲಸ ಮಾಡುತ್ತಿರುವ ಉದ್ಯೋಗಿ ಶನಿವಾರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಅವರಿಗೆ ದೂರು ಸಲ್ಲಿಸಿದ್ದಾರೆ. ಜನವರಿ 7ರ ಭಾನುವಾರದಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಮತ್ತು 354 (ಎ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ಉರ್ವಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ದೂರು ತನಿಖೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲಿ ಅವರು ಜೂನ್ 21, 2023ರಂದು ಮುಡಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಮೂರು ವರ್ಷಗಳ ಹಿಂದೆ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಅಂದಿನ ಮುಡಾ ಆಯುಕ್ತರ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿತ್ತು. ಅವರ ಪತ್ನಿಯೇ ದೂರು ದಾಖಲಿಸಿದ್ದರು.

You cannot copy content of this page

Exit mobile version