ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಿಶೇಷ ವಿಮಾನದಲ್ಲಿ ಸಾಗಿಸಿ ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಶನಿವಾರ ಆರೋಪಿಸಿದ್ದಾರೆ.
ಅರ್ಕಾವತಿ ರೀಡೂ ಹಗರಣದ ವಿಷಯದಲ್ಲಿ ಮಾಡಿದಂತೆ ಈ ಹಗರಣವನ್ನು
ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. 2013ರ ಚುನಾವಣಾ ಅಫಿಡವಿಟ್‌ನಲ್ಲಿ ವಿವಾದಸ್ಪದ ಜಮೀನನ್ನು ಏಕೆ ಘೋಷಿಸಿಲ್ಲ ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
2005-06ರ ಅವಧಿಯಲ್ಲಿ ಇದೆಲ್ಲ ನಡೆದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದರೆ 2013ರ ಚುನಾವಣಾ ಅಫಿಡವಿಟ್‌ನಲ್ಲಿ ಈ ಆಸ್ತಿಯನ್ನು ಏಕೆ ಘೋಷಿಸಲಿಲ್ಲ? ಹಗರಣವಿಲ್ಲದಿದ್ದರೆ ಮುಖ್ಯಮಂತ್ರಿಗಳು ಏಕೆ ತನಿಖೆಗೆ ಹೆದರುತ್ತಿದ್ದಾರೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಇನ್ನು ಸಚಿವ ಬೈರತಿ ಸುರೇಶ ಅವರು ಮುಡಾದಿಂದ ವಿಶೇಷ ವಿಮಾನದಲ್ಲಿ ಯಾವ ದಾಖಲೆಗಳನ್ನು ಸ್ಥಳಾಂತರಿಸಿದ್ದಾರೆ ಮತ್ತು ಅವುಗಳನ್ನು ಎಲ್ಲಿ ಇಟ್ಟಿದ್ದಾರೆ ಎಂದು ಪ್ರಶ್ನಿಸಿದರು.