ಬೆಂಗಳೂರು : ಜಾರಿ ನಿರ್ದೇಶನಾಲಯವು ಸುಮಾರು 100 ಕೋಟಿ ರೂ. ಮೌಲ್ಯದ 92 ಮುಡಾ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. 2002 ರ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ ಈ ಕ್ರಮ ಕೈಗೊಂಡಿರುವುದಾಗಿ ಜಾರಿ ನಿರ್ದೇಶಾನಲಯ ತಿಳಿಸಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಇತರರು ಆರೋಪಿಗಳಾಗಿರುವ ಈ ಪ್ರಕರಣದಲ್ಲಿ ಇಲ್ಲಿಯವರೆಗೆ 400 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಇಡಿ ವಶಕ್ಕೆ ಪಡೆದಿದೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆಯೆನ್ನಲಾದ ಈ ಹಗರಣದಲ್ಲಿ ಸಿಎಂ ವಿರುದ್ದ ದೂರು ದಾಖಲಾಗಿತ್ತು.