ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, 10 ದಿನಗಳ ಕಾಲ — ಅಂದರೆ ಡಿಸೆಂಬರ್ 8 ರಿಂದ 19 ರವರೆಗೆ — ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದ್ದಾರೆ.
ಡಿಸೆಂಬರ್ 8 ರಿಂದ 19 ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. 10 ದಿನಗಳ ಕಾಲ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
