ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್; ಡಿ.8 ರಿಂದ 10 ದಿನ ಅಧಿವೇಶನಕ್ಕೆ ಸಂಪುಟ ಸಿದ್ಧತೆ

ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, 10 ದಿನಗಳ ಕಾಲ — ಅಂದರೆ ಡಿಸೆಂಬರ್ 8 ರಿಂದ 19 ರವರೆಗೆ — ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದ್ದಾರೆ.

ಡಿಸೆಂಬರ್ 8 ರಿಂದ 19 ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. 10 ದಿನಗಳ ಕಾಲ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು