Tuesday, January 13, 2026

ಸತ್ಯ | ನ್ಯಾಯ |ಧರ್ಮ

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್; ಮತ್ತೊಂದು ಸಮರಕ್ಕೆ ಸಜ್ಜಾಗಲಿರುವ ಅಖಾಡ

ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಸಂಬಂಧ ಇಂದು ಹೈಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ, ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂಬ ಮಾಹಿತಿ ಲಭ್ಯವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣೆ ನಡೆಸಬಹುದೆಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ರಾಜ್ಯ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಅಂತ್ಯಕ್ಕೆ ಮೀಸಲಾತಿ ಪಟ್ಟಿಯನ್ನು ನೀಡಲಾಗುತ್ತದೆ. ಆ ಬಳಿಕ ತಾಲ್ಲೂಕು, ಜಿಲ್ಲಾ ಪಂಚಾಯ್ತಿಗಳಿಗೆ ಚುನಾವಣೆ ನಡೆಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ.

ಇದರ ಅನ್ವಯ ಜೂನ್, ಜುಲೈ ನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸಬಹುದಾಗಿ ಅಂತ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಮೂರು ವರ್ಷಗಳಾದರೂ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸದೇ ಇರುವ ಸಂಬಂಧ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಿತು. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ವೇಳೆಯಲ್ಲಿ ಈ ಮಾಹಿತಿಯನ್ನು ಅಡ್ವೋಕೇಟ್ ಜನರಲ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಚುನಾವಣಾ ಆಯೋಗದ ಪರ ಹಿರಿಯ ವಕೀಲ ಎನ್.ಕೆ ಫಣೀಂದ್ರ ಅವರು ಸರ್ಕಾರವು ಮೀಸಲಾತಿ ಪಟ್ಟಿಯನ್ನು ನೀಡಿದರೇ ವೇಳಾಪಟ್ಟಿ ಪ್ರಕಟಿಸಲು ರೆಡಿ ಇರೋದಾಗಿ ಹೇಳಿದರು.

ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಜೂನ್ ಅಥವಾ ಜುಲೈನಲ್ಲಿ ಚುನಾವಣಾ ಆಯೋಗವು ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆಸಬಹುದು ಎಂಬುದಾಗಿ ಎಜಿ ಹೈಕೋರ್ಟ್ ಗೆ ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page