Monday, July 28, 2025

ಸತ್ಯ | ನ್ಯಾಯ |ಧರ್ಮ

ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಹಠಾತ್‌ ಸಾವು

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಇಂದು ಬೆಳಿಗ್ಗೆ ಹೃದಯಾಘಾತದಿಂದ ಮರಣ ಹೊಂದಿದ್ದಾರೆ.

ಇಂದು ಬೆಳಿಗ್ಗೆ ಜಿಮ್‌ ಗೆ ತೆರಳಿದ್ದ ಗುರುಲಿಂಗ ಸ್ವಾಮಿ ಅವರು ಹಠಾತ್ತನೆ ಕುಸಿದು ಬಿದ್ದರು. ನಂತರ ಅವರನ್ನು ನಾಗರಬಾವಿಯ ಯೂನಿಟಿ ಲೈಫ್‌ ಲೈನ್‌ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತರ ನಾಗರಬಾವಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ಕಲ್ಪಿಸಲಾಗಿದೆ. ನಂತರ ಅವರ ಅಂತ್ಯ ಸಂಸ್ಕಾರವನ್ನು ಅವರ ಹುಟ್ಟೂರು ರಾಮದುರ್ಗದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸರಳ ಸ್ವಭಾವದ, ಎಲ್ಲರೊಂದಿಗೆ ಬೆರೆಯುವ ವ್ಯಕ್ತಿತ್ವದ ಗುರುಲಿಂಗ ಸ್ವಾಮಿ ಅವರ ನಿಧನಕ್ಕೆ ಹಲವಾರು ಪತ್ರಕರ್ತರು ಕಂಬನಿಗೆರೆದಿದ್ದಾರೆ. ಬೆಂಗಳೂರು ಪ್ರೆಸ್‌ ಕ್ಲಬ್‌ ಅಧ್ಯಕ್ಷ ಆರ್.ಶ್ರೀಧರ್‌, ಪ್ರಧಾನ ಕಾರ್ಯದರ್ಶಿ ಬಿ.ಪಿ.ಮಲ್ಲಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಹಲವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page