ಉತ್ತರ ಕನ್ನಡ : ಭಟ್ಕಳ ಪಟ್ಟಣ ಸೇರಿದಂತೆ ತಾಲೂಕಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಮುಂದುವರೆದಿದ್ದು, ಪ್ರವಾಹ ಭೀತಿ ಉಂಟಾಗಿದೆ.
ಪಟ್ಟಣದಲ್ಲಿ ಮಳೆಯಾದ ಪರಿಣಾಮ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹೀಗಾಗಿ ಕೆಲವು ಕಡೆ ಸಂಪರ್ಕ ಕಡಿತಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಟ್ಕಳ ಪಟ್ಟಣ ಸಂಪೂರ್ಣ ಜಲಾವೃತವಾಗಿದ್ದು, ಮುಂಡೊಳ್ಳಿ, ಚೌಥನಿ, ಮಣ್ಕುಳಿ, ಮೂಡುಭಟ್ಕಳ, ತಲಾಂದ ಪ್ರದೇಶಗಳಲ್ಲಿ ಅತಿ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅನಾಹುತ ಸೃಷ್ಠಿಸಿದೆ. ಸಾರ್ವಜನಿಕರ ನಿದ್ದೆಗೆಡಿಸಿದೆ.
ಶಾಸಕ ಸುನೀಲ ನಾಯ್ಕ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ರಕ್ಷಣಾ ಕಾರ್ಯಾಚರಣೆಗೆ ಕುಮಟಾದಿಂದ ಎಸ್.ಡಿ.ಆರ್.ಎಫ್ ದಾವಿಸಿದೆ. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ತಂಡದ ಹಲವು ಸದಸ್ಯರ ತಂಡವೂ ಬರುತ್ತಿದೆ ಎಂದು ಹೇಳಿದ್ದಾರೆ.