ದೇಶವೇ ಬೆಚ್ಚಿ ಬೀಳಿಸುವಂತೆ ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಭೀಕರವಾಗಿ ಹತ್ಯೆಯಾದ ನೇಪಾಳ ಮೂಲದ ಮಹಾಲಕ್ಷ್ಮಿ ಕೊಲೆಗಾರ ಎಂದು ಶಂಕಿಸಲಾದ ಆರೋಪಿಯೊಬ್ಬ ಒಡಿಶಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಹಾಲಕ್ಷ್ಮಿ ಮೃತ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಇಟ್ಟಿದ್ದ ಪ್ರಕರಣದಲ್ಲಿ ಆರೋಪಿಯಾಗಿ, ಈಗ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಮುಕ್ತಿ ರಂಜನ್ ರಾಯ್ ಎಂದು ಗುರುತಿಸಲಾಗಿದೆ.
ಒಡಿಶಾ ಮೂಲದ ಮುಕ್ತಿ ರಂಜನ್ ರಾಯ್ ಹೆಬ್ಬಗೋಡಿಯಲ್ಲಿ ನೆಲೆಸಿದ್ದನು. ತಮ್ಮನೊಂದಿಗೆ ಹೆಬ್ಬಗೋಡಿಯಲ್ಲಿ ವಾಸವಿದ್ದು ಪ್ರತಿನಿತ್ಯ ಮಲ್ಲೇಶ್ವರಂನ ಫ್ಯಾಶನ್ ಫ್ಯಾಕ್ಟರಿಯಲ್ಲಿ ಟೀಂ ಹೆಡ್ ಆಗಿ ಕೆಲಸ ಮಾಡುತ್ತಿದ್ದನು. ಈ ವೇಳೆ ಅದೇ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಾಲಕ್ಷ್ಮಿಯನ್ನ ಪ್ರೀತಿಸಲು ಶುರು ಮಾಡಿದ್ದ.
ಸಧ್ಯ ಮಹಾಲಕ್ಷ್ಮಿ ಕೊಲೆಯಾಗುತ್ತಿದ್ದಂತೆ ಬೆಂಗಳೂರು ತೊರೆದ ಮುಕ್ತಿ ರಂಜನ್ ರಾಯ್ ಪಶ್ಚಿಮ ಬಂಗಾಳದಲ್ಲಿ ಇದ್ದಾನೆ ಎಂದು ಪೊಲೀಸರಿಗೆ ಮಾಹಿತಿ ದೊರಕಿತ್ತು.
ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಆತನನ್ನು ಬಂದಿಸಲು ಬೆಂಗಳೂರಿನಿಂದ ಒಂದು ತಂಡ ತೆರಳಿತ್ತು. ಇದೀಗ ಮಹಾಲಕ್ಷ್ಮಿ ಕೊಲೆ ಆರೋಪಿ ಆಗಿರುವಂತಹ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ತಿಳಿದು ಬಂದಿದೆ.