ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಬಂಧನವಾದ ಕೆಲ ಹೊತ್ತಿನಲ್ಲೆ ಎದೆ ನೋವು ಕಾಣಿಸಿಕೊಂಡಿದ್ದು ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಐಸಿಯು ವಾರ್ಡ್‌ನಲ್ಲಿದ್ದ ಶ್ರೀಗಳಿಗೆ ಇಸಿಜಿ ಮಾಡಲಾಗಿದ್ದು, ಹೃದಯ ಸಂಬಂಧಿ ಸಮಸ್ಯೆ ದೃಢವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದಾರೆ. ಇದೀಗ ಮಯೋಕಾರ್ಡಿಯಲ್ ಇನ್ಫಾರ್ಕ್ಷನ್(myocardial infarction) ಮತ್ತು ರಕ್ತದಲ್ಲಿ ಕೆಲವು ಬದಲಾವಣೆಗಳು ತೋರಿಸುತ್ತಿದೆ ಎಂದು ಅವರು ಹೇಳಿದ್ದಾರೆ.