ಮುರುಘಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ

ಚಿತ್ರದುರ್ಗ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಇಲ್ಲಿನ ಮುರುಘಾ ಮಠಕ್ಕೆ ಭೇಟಿ ನೀಡಿ ಶಿವಮೂರ್ತಿ ಮುರುಘ ಶರಣರ ಆಶೀರ್ವಾದ ಪಡೆದು, ಮಠಾಧೀಶರೊಂದಿಗೆ ಸಂವಾದ ನಡೆಸಿದರು. ರಾಜ್ಯದ ವಿವಿದೆಡೆಯಿಂದ ಆಗಮಿಸಿದ 20 ಕ್ಕೂ ಹೆಚ್ಚು ಮಠಾಧೀಶರು ಸಂವಾದದಲ್ಲಿ ಪಾಲ್ಗೊಂಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿ ಹಲವಾರು ಕಾಂಗ್ರೆಸ್ ಮುಖಂಡರು ಇದ್ದರು.

ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ರಸ್ತೆ ಮಾರ್ಗವಾಗಿ ಚಿತ್ರದುರ್ಗಕ್ಕೆ ಬಂದು, ಮೊದಲು ಇಲ್ಲಿನ ಮುರುಘಾ ಮಠಕ್ಕೆ ಭೇಟಿ ನೀಡಿ ಮಠಾಧೀಶರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿಯನ್ನು ಅದ್ದೂರಿಯಾಗಿ ಸ್ವಾಗತಿಸಿದರು.

Related Articles

ಇತ್ತೀಚಿನ ಸುದ್ದಿಗಳು