ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಮೊದಲ ಪೋಕ್ಸೋ ಪ್ರಕರಣದ ತೀರ್ಪು ಇಂದು (ಬುಧವಾರ) ಪ್ರಕಟವಾಗಲಿದೆ.
ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರಪ್ಪ ಹಡಪದ್ ಅವರು ಬೆಳಿಗ್ಗೆ 11 ಗಂಟೆಗೆ ಈ ತೀರ್ಪನ್ನು ಪ್ರಕಟಿಸಲಿದ್ದಾರೆ.
ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಶರಣರ ವಿರುದ್ಧ ದಾಖಲಾಗಿದ್ದ ಎರಡು ಪೋಕ್ಸೋ ಪ್ರಕರಣಗಳಲ್ಲಿ ಮೊದಲ ಪ್ರಕರಣದ ವಿಚಾರಣೆಯನ್ನು ವಿಸ್ತೃತವಾಗಿ ನಡೆಸಲಾಗಿತ್ತು.
ನವೆಂಬರ್ 18 ರಂದು ಸರ್ಕಾರಿ ಅಭಿಯೋಜಕರ ಅಂತಿಮ ವಾದವನ್ನು ಆಲಿಸಿದ ನಂತರ ನ್ಯಾಯಾಧೀಶರು ತೀರ್ಪನ್ನು ಕಾಯ್ದಿರಿಸಿದ್ದರು. ಮಠದ ಶರಣರ ಪರವಾಗಿ ವಕೀಲರಾದ ಸಿ.ವಿ. ನಾಗೇಶ್ ಅವರು ವಾದ ಮಂಡಿಸಿದ್ದರು.
