ಮುರುಘಾ ಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆರೋಗ್ಯ ತಪಾಸಣೆ ನಂತರ ಮತ್ತೆ ಜೈಲಿಗೆ

ಬೆಂಗಳೂರು: ಫೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಮಠದ ಮಾಜಿ ಸ್ವಾಮಿ ಮುರುಘಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಸ್ಕ್ಯಾನಿಂಗ್‌ ಮಾಡಿಸಿದ ವೈದ್ಯರು ಅವರಿಗೆ ಯಾವುದೇ ಸಮಸ್ಯೆಯಿಲ್ಲವೆಂದು ಹೇಳಿರುವುದಾಗಿ ವರದಿಯಾಗಿದೆ.

ಚಿಕಿತ್ಸೆಯ ನಂತರ ಮತ್ತೆ ಅವರನ್ನು ಜೈಲಿಗೆ ವರ್ಗಾಯಿಸಲಾಗಿದೆ. ಅವರಿಗೆ ಮೂತ್ರ ಸೋಂಕು ಕಾಣಿಸಿಕೊಂಡಿತ್ತು ಎನ್ನಲಾಗಿತ್ತು.

ಮಠದ ವಿದ್ಯಾರ್ಥಿ ನಿಲಯದಲ್ಲಿ ಹೆ‍ಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತರಾಗಿರುವ ಮುರುಘಾ ಶರಣ ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದಾರೆ.

ಎಲ್ಲಾ ವೈದ್ಯಕೀಯ ತಪಾಸಣೆ, ಸ್ಯಾನಿಂಗ್‌ ಹಾಗೂ ಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಯಾವುದೇ ತೊಂದರೆಯಿಲ್ಲ ಎಂದು ತಿಳಿದ ನಂತರ ಅವರನ್ನು ಮತ್ತೆ ಜೈಲಿಗೆ ಮರಳಿಸಲಾಗಿದೆ

Related Articles

ಇತ್ತೀಚಿನ ಸುದ್ದಿಗಳು