Home ದೇಶ ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಎರಡು ಬೋಗಿಗಳು ಸುಟ್ಟು ಕರಕಲು

ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಎರಡು ಬೋಗಿಗಳು ಸುಟ್ಟು ಕರಕಲು

0

ಚೆನ್ನೈ: ತಮಿಳುನಾಡಿನ ಚೆನ್ನೈ ಹೊರವಲಯದಲ್ಲಿ ಶುಕ್ರವಾರ ರಾತ್ರಿ ರೈಲು ಅಪಘಾತ ಸಂಭವಿಸಿದೆ. ತಿರುವಳ್ಳೂರು ಸಮೀಪದ ಕವರಿಪೇಟ್ಟೈ ಎಂಬಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಈ ಅವಘಡದಲ್ಲಿ ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳು ಸುಟ್ಟು ಕರಕಲಾಗಿವೆ. ಬೆಂಕಿ ಅವಘಡದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ರೈಲನ್ನು ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ಎಂದು ಗುರುತಿಸಲಾಗಿದೆ. ಹಳಿಗಳ ಮೇಲೆ ನಿಂತಿದ್ದ ಗೂಡ್ಸ್ ರೈಲಿಗೆ ಹಿಂದಿನಿಂದ ಬಂದ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಈ ಅಪಘಾತದಲ್ಲಿ ಹಲವು ಬೋಗಿಗಳು ಹಳಿತಪ್ಪಿವೆ. ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸಂತ್ರಸ್ತರನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

You cannot copy content of this page

Exit mobile version