Home ಬೆಂಗಳೂರು ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲ ಮುಖ್ಯಮಂತ್ರಿಗಳಿಗೆ ಆಹ್ವಾನ: ಸಿದ್ಧತಾ ಸಭೆಯಲ್ಲಿ ತೀರ್ಮಾನ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲ ಮುಖ್ಯಮಂತ್ರಿಗಳಿಗೆ ಆಹ್ವಾನ: ಸಿದ್ಧತಾ ಸಭೆಯಲ್ಲಿ ತೀರ್ಮಾನ

0

ಬೆಂಗಳೂರು: ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಮೈಸೂರು ದಸರಾ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಈ ಬಾರಿಯ ನಾಡಹಬ್ಬದಲ್ಲಿ ನೆರೆ ರಾಜ್ಯಗಳ ಸಾಂಸ್ಕೃತಿಕ ತಂಡಗಳ ಪ್ರದರ್ಶನ, ಅತ್ಯಾಕರ್ಷಕ ಏರ್ ಶೋ, ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವಿಶೇಷ ಸಹಭಾಗಿತ್ವ ಹಾಗೂ ಬೃಹತ್ ಡ್ರೋನ್ ಶೋ ಪ್ರಮುಖ ಆಕರ್ಷಣೆಯಾಗಲಿವೆ. ಜಾಗತಿಕ ಮಟ್ಟದಲ್ಲಿ ಉತ್ಸವವನ್ನು ಪರಿಚಯಿಸುವ ನಿಟ್ಟಿನಲ್ಲಿ ವಿವಿಧ ದೇಶಗಳ ರಾಯಭಾರಿಗಳು ಮತ್ತು ವಿದೇಶಿ ಗಣ್ಯರನ್ನೂ ಆಹ್ವಾನಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ಚಿತ್ರಸಂತೆ, ಫ್ಲೀ ಮಾರ್ಕೆಟ್, ವಿಂಟೇಜ್ ಕಾರ್ ರ್ಯಾಲಿ ಹಾಗೂ ರಂಗೋಲಿ ಸ್ಪರ್ಧೆಗಳು ಹಬ್ಬದ ಮೆರುಗನ್ನು ಹೆಚ್ಚಿಸಲಿವೆ.

ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಭಾರತೀಯ ಸಶಸ್ತ್ರ ಪಡೆಗಳು, ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO), ಡಿಆರ್‌ಡಿಒ (DRDO), ಶೈಕ್ಷಣಿಕ ಸಂಸ್ಥೆಗಳು ಹಾಗೂ ಚಿತ್ರರಂಗದ ಗಣ್ಯರನ್ನು ಸಕ್ರಿಯವಾಗಿ ಭಾಗವಹಿಸುವಂತೆ ಆಹ್ವಾನಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

You cannot copy content of this page

Exit mobile version