ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ನಾಡ ಹಬ್ಬ ಮೈಸೂರು ದಸರಾಗೆ ಚಾಲನೆ ನೀಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿಗೆ ಬಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೂತ್‌ ಅವರು ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದರು.

ಮಂಡಕ್ಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬಸವರಾಜ ಬೊಮ್ಮಾಯಿ ಮತ್ತು  ಥಾವರ್‌ ಚಂದ್‌ ಅವರು  ಉದ್ಘಾಟನೆಗೆ ಬರಮಾಡಿಕೊಂಡರು.

ನಂತರ ಅಲ್ಲಿಂದ ನೇರವಾಗಿ ಚಾಮುಂಡೇಶ್ವರಿ ಬೆಟ್ಟಕ್ಕೆ ಮುರ್ಮು ಅವರು ಹೋಗಿದ್ದು, ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದರು. ನಂತರ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಹಬ್ಬಕ್ಕೆ ಚಾಲನೆ ನೀಡಿದರು. ಈ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೂತ್‌ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗು ಹಲವು ಗಣ್ಯ ವ್ಯಕ್ತಿಗಳು ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.

Related Articles

ಇತ್ತೀಚಿನ ಸುದ್ದಿಗಳು