Saturday, January 4, 2025

ಸತ್ಯ | ನ್ಯಾಯ |ಧರ್ಮ

ಕಾಂಗ್ರೆಸ್ ವಿರುದ್ಧ ಒಗ್ಗಟ್ಟಾಗಿ ಹೋರಾಡುವಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ

ಬೆಂಗಳೂರು: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶುಕ್ರವಾರ ಕರ್ನಾಟಕ ಬಿಜೆಪಿಯ ನಾಯಕರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕಾಂಗ್ರೆಸ್ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವಂತೆ ಕರೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಹಲವು ಲೋಪಗಳನ್ನು ಎತ್ತಿ ತೋರಿಸಿದ ನಡ್ಡಾ, ಆಡಳಿತ ಪಕ್ಷವನ್ನು ಟಾರ್ಗೆಟ್ ಮಾಡಲು ಇವುಗಳನ್ನು ಬಳಸಿಕೊಳ್ಳುವಂತೆ ಕರ್ನಾಟಕ ಬಿಜೆಪಿ ನಾಯಕರಿಗೆ ಹೇಳಿದರು.

ಬೆಂಗಳೂರಿನಲ್ಲಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಪತ್ರಕರ್ತರೊಂದಿಗೆ ಸಂವಾದ ನಡೆಸಿದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ಟಿ ನಾರಾಯಣಸ್ವಾಮಿ, ಇದೊಂದು ಆಕಸ್ಮಿಕ ಭೇಟಿಯಾಗಿತ್ತು‌ ಎಂದರು.

“ಅವರು (ನಡ್ಡಾ) ಕೆಲವು ಪೂರ್ವ ನಿಗದಿತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದಿದ್ದಾರೆ. ನಾವು (ರಾಜ್ಯ ನಾಯಕರು) ಅವರಿಗೆ ಕರ್ನಾಟಕದ ರಾಜಕೀಯ ಪರಿಸ್ಥಿತಿ ಮತ್ತು ಇಲ್ಲಿ ಆಡಳಿತ ಪಕ್ಷವು ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದರ ಕುರಿತು ವಿವರಿಸಿದೆವು. ನಮ್ಮ ಮಾತನ್ನು ಆಲಿಸಿದ ಅವರು, ಆಡಳಿತ ಪಕ್ಷದ ವೈಫಲ್ಯಗಳನ್ನು ಬಯಲಿಗೆಳೆಯಲು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಸೂಚನೆ ನೀಡಿದರು’’ ಎಂದು ನಾರಾಯಣಸ್ವಾಮಿ ಹೇಳಿದರು.

ವಿಧಾನಸಭೆಯಲ್ಲಿ ತಮ್ಮ ಸಹವರ್ತಿ ಆರ್.ಅಶೋಕ ಅವರೊಂದಿಗೆ, ನಾರಾಯಣಸ್ವಾಮಿ ಅವರು ರಾಜ್ಯದಲ್ಲಿ ಕಾಂಗ್ರೆಸ್‌ನ ಸೇಡಿನ ರಾಜಕಾರಣದ ಬಗ್ಗೆ ಗಮನ ಸೆಳೆದರು, ಬಿಜೆಪಿ ಎಂಎಲ್‌ಸಿ ಸಿಟಿ ರವಿ ವಿರುದ್ಧ ದಾಖಲಾದ ಪ್ರಕರಣವನ್ನು ಉದಾಹರಣೆಯಾಗಿ ಉಲ್ಲೇಖಿಸಿದರು.

ಕೇಸರಿ ಪಕ್ಷದ ರಾಜ್ಯ ಘಟಕವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ನಡ್ಡಾ ಅವರು ಕರ್ನಾಟಕದ ಪ್ರಮುಖ ಬಿಜೆಪಿ ನಾಯಕರನ್ನು ಖುದ್ದಾಗಿ ಕರೆದಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page