ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ 90 ಮೀಟರ್ ಏರಿಯಲ್ ಪ್ಲಾಟ್ಫಾರ್ಮ್ ಲ್ಯಾಡರ್ ಅನ್ನು ಲೋಕಾರ್ಪಣೆ ಮಾಡಿ “ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ʼದೀಪಾವಳಿ ಎಲ್ಲರ ಬದುಕಿನ ಕತ್ತಲನ್ನು ಹೋಗಲಾಡಿಸಿ, ಹೊಸ ಬೆಳಕನ್ನು ನೀಡಲಿ ಎಂದು ಹಾರೈಸಿದರು.
ಇದರ ಜೊತೆಗೆ ಪರಿಸರ ಸಂರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಹೆಚ್ಚು ಪರಿಸರ ಮಾಲಿನ್ಯವಾಗದ ರೀತಿ ಹಬ್ಬವನ್ನು ಆಚರಿಸಲು ಸಂಕಲ್ಪ ಮಾಡೋಣ.” ಎಂದು ಹೇಳಿದರು.