Thursday, September 11, 2025

ಸತ್ಯ | ನ್ಯಾಯ |ಧರ್ಮ

ಡಿಸೆಂಬರ್ ನಲ್ಲಿ ಸೆಟ್ಟೇರಲಿದೆ ನಾಗಭೂಷಣ್ ನಟನೆಯ ‘ಟಗರು ಪಲ್ಯ’- ಉಮೇಶ್ ಕೆ ಕೃಪ ನಿರ್ದೇಶನದ ಮೊದಲ ಸಿನಿಮಾ

ಬೆಂಗಳೂರು: ಟಗರು ಸಿನಿಮಾ ಮೂಲಕ ಖ್ಯಾತಿ ಗಳಿಸಿದ ನಟ ಡಾಲಿ ಧನಂಜಯ್ ಸ್ಯಾಂಡಲ್ ವುಡ್ ಅಂಗಳದ ಬಹು ಬೇಡಿಕೆಯ ನಟ. ಆದ್ರೆ ಕೇವಲ ನಟನಾಗಿ ಮಾತ್ರ ಉಳಿಯದೇ ನಿರ್ಮಾಪಕನಾಗಿಯೂ ಡಾಲಿ ಗಮನ ಸೆಳೆಯುತ್ತಿದ್ದಾರೆ. ಡಾಲಿ ಪಿಕ್ಚರ್ಸ್ ಮೂಲಕ ಸಿನಿಮಾ ನಿರ್ಮಾಣವನ್ನು ಮಾಡುತ್ತಿದ್ದು ಮೊದಲೆರಡು ಸಿನಿಮಾವಾಗಿ ‘ಬಡವ ರಾಸ್ಕಲ್’ ಹಾಗೂ ‘ಹೆಡ್ ಬುಶ್’ ನಿರ್ಮಾಣ ಮಾಡಲಾಗಿತ್ತು. ಇತ್ತೀಚೆಗೆ ಡಾಲಿ ಪಿಕ್ಚರ್ಸ್ ಮೂರನೇ ಸಿನಿಮಾ ‘ಟಗರು ಪಲ್ಯ’ ಅನೌನ್ಸ್ ಆಗಿತ್ತು. ಮೋಷನ್ ಪೋಸ್ಟರ್ ಮೂಲಕ ಸುದ್ದಿಯಾಗಿದ್ದ ‘ಟಗರು ಪಲ್ಯ’ ಇದೀಗ ಸೆಟ್ಟೇರೋಕೆ ರೆಡಿಯಾಗಿದೆ.

ಈ ಕುರಿತು ಮಾಹಿತಿ ನೀಡಿದ ನಿರ್ದೇಶಕ ಉಮೇಶ್ ಕೆ ಕೃಪರವರು, ‘ಟಗರು ಪಲ್ಯ’ ಮೂಲಕ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆ ಮಾಡಿಕೊಟ್ಟಿದೆ. ಚಿತ್ರದಲ್ಲಿ ನಾಗಭೂಷಣ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಮೂಲಕ ಉಮೇಶ್ ಕೆ ಕೃಪ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಯೋಗರಾಜ್ ಭಟ್ ಸೇರಿದಂತೆ ಹಲವು ನಿರ್ದೇಶಕರ ಜೊತೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. ‘ಟಗರು ಪಲ್ಯ’ ಕಟೆಂಟ್ ಆಧಾರಿತ ಸಿನಿಮಾವಾಗಿದ್ದು, ಒಂದೊಳ್ಳೆ ಮನರಂಜನೆಯನ್ನು ಪ್ರೇಕ್ಷಕರಿಗೆ ನೀಡಲಿದೆ. ಸಿನಿಮಾ ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಸಿನಿಮಾ ಸೆಟ್ಟೇರಲಿದೆ ಎಂದು ತಿಳಿಸಿದ್ದಾರೆ.

ವಾಸುಕಿ ವೈಭವ್ ಸಂಗೀತ ನಿರ್ದೇಶನ, ಎಸ್. ಕೆ. ರಾವ್ ಕ್ಯಾಮೆರಾ ವರ್ಕ್, ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರಕ್ಕೆ ನಾಯಕಿ ಯಾರೆಂಬುದು ಸದ್ಯದಲೇ ರಿವೀಲ್ ಆಗಲಿದ್ದು, ರಂಗಾಯಣ ರಘು,ನಾಗಭೂಷಣ್, ತಾರಾ, ಶರತ್ ಲೋಹಿತಾಶ್ವ ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page