Home ಬ್ರೇಕಿಂಗ್ ಸುದ್ದಿ ನಾಗಮಂಗಲ ಗಲಭೆ : ಪೊಲೀಸ್ ಇನಿಸ್ಪೆಕ್ಟರ್ ಅಮಾನತು

ನಾಗಮಂಗಲ ಗಲಭೆ : ಪೊಲೀಸ್ ಇನಿಸ್ಪೆಕ್ಟರ್ ಅಮಾನತು

0

ನಾಗಮಂಗಲ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಉಂಟಾದ ಗಲಭೆ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಅವರನ್ನ ಅಮಾನತು ಮಾಡಿ ಐಜಿಪಿ ಆದೇಶ ಹೊರಡಿಸಿದ್ದಾರೆ.

ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ನಾಗಮಂಗಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ನಿನ್ನೆ ರಾತ್ರಿ ಐಜಿಪಿ ಆದೇಶ ಹೊರಡಿಸಿದ್ದಾರೆ.

ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, 52 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ, ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಅಂಗಡಿಗಳು ಓಪನ್ ಆಗುತ್ತಿವೆ. ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ 6 ಎಫ್‌ಐಆರ್ ದಾಖಲಿಸಲಾಗಿದೆ. 52 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದರು.

You cannot copy content of this page

Exit mobile version