ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡೊದಾಗಿ KMF ನಿಂದ ಘೋಷಣೆ ಮಾಡಲಾಗಿತ್ತು. ಆದರೆ ಇದಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಗ್ನಲ್ ಸಿಕ್ಕಿರಲ್ಲ. ಆದರೀಗ ಈ ಪ್ರಸ್ತಾಪ ಮತ್ತೆ ಸಿಎಂ ಬೊಮ್ಮಾಯಿ ಬಳಿ ಬಂದ ಕಾರಣ ಗ್ರಾಹಕರಿಗೆ ಯಾವುದೇ ತೊಂದರೆ ಯಾಗದಂತೆ ದರ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ. ಇದರ ಪರಿಣಾಮ ಸಿಎಂ ಸಲಹೆಯಂತೆ ಇಂದು ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ.
ಈ ಕುರಿತಂತೆ ಇಂದಿನ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಂದಿನ ಉತ್ಪನ್ನಗಳ ದರ ಹೆಚ್ಚಳ ಸಂಬಂಧ ಮಹತ್ವದ ಸಭೆ ನಡೆಸಲಾಯಿತು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಂದಿನಿ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ ಸೌಲಭ್ಯವನ್ನು ರೈತರು ಪಡೆಯಲಿದ್ದಾರೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕೊನೆಗೂ ಅಳೆದು ತೂಗಿ ನಂದಿನ ಹಾಲು, ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.