Sunday, June 16, 2024

ಸತ್ಯ | ನ್ಯಾಯ |ಧರ್ಮ

ನನ್ನ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ:ಬಿಜೆಪಿಗೆ ಸಿದ್ದರಾಮಯ್ಯ ಸವಾಲು

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಕ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿಗರು ಸೇರಿ ನಡೆಸುತ್ತಿರುವ ಜನಸಂಕಲ್ಪ ಯಾತ್ರೆಯ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸವಾಲೆಸಗಿ ಮಾತನಾಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿದ ಸಿದ್ದರಾಮಯ್ಯನವರ ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ  ಬಿ ಎಸ್‌ ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ  ಬೊಮ್ಮಾಯಿಯವರಿಗೆ ನನ್ನ ಎರಡೇ ಎರಡು ಸವಾಲು. 1.ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ. 2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ಸವಾಲೆಸಗಿದ್ದಾರೆ.

ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಯಡಿಯೂರಪ್ಪನವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು ಎಂದು ಹೇಳಿದ್ದಾರೆ.

ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಬೊಮ್ಮಾಯಿಯವರು ಒಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ ಪೇಸಿಎಂʼ ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಯಾಡಿಯೂರಪ್ಪನವರೇ ನಿಮ್ಮ ನರೇಂದ್ರ ಮೋದಿಯವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ಸವಾಲಾಕಿದ್ದಾರೆ.

ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಕೇಂದ್ರ  ಬಿಜೆಪಿಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಜನಸಂಕಲ್ಪ ಯಾತ್ರೆಯ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.



Related Articles

ಇತ್ತೀಚಿನ ಸುದ್ದಿಗಳು